Daily Horoscope

Select Your Language

Notifications

webdunia
webdunia
webdunia
webdunia

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Gold
ಬೆಂಗಳೂರು: ಕಳೆದ ಎರಡು ದಿನ ಚಿನ್ನದ ದರ ಕೊಂಚ ಇಳಿಕೆಯಾಗಿ ಸಮಾಧಾನ ತಂದಿತ್ತು. ಆದರೆ ಇಂದು ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿದ್ದರೆ ಉಳಿದ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ಎರಡು ದಿನಗಳಿಂದ ಪರಿಶುದ್ಧ ಚಿನ್ನದ ದರ ತಕ್ಕಮಟ್ಟಿಗೆ ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ದರ ಭಾರೀ ಏರಿಕೆಯಾಗಿದೆ. ಇತರೆ ಚಿನ್ನದ ದರ ಮಾತ್ರ ಇಂದು ಕೊಂಚ ಇಳಿಕೆಯಾಗಿದೆ. ಇದರೊಂದಿಗೆ ಏರಿಕೆ-ಇಳಿಕೆಯ ಕಣ್ಣಾಮುಚ್ಚಾಲೆ ಮುಂದುವರಿದಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,01,350.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,02,350.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 45 ರೂ. ಇಳಿಕೆಯಾಗಿದ್ದು 10,003 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 40 ರೂ. ಇಳಿಕೆಯಾಗಿದ್ದು 9,170 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 33 ರೂ. ಏರಿಕೆಯಾಗಿದ್ದು 7,503 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಕೊಂಚ ಏರಿಕೆಯಾಗಿತ್ತು. ಆದರೆ ಇಂದು ಕೊಂಚ ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿ ಬೆಳ್ಳಿ ದರ 2,000 ರೂ. ಗಳಷ್ಟು ಇಳಿಕೆಯಾಗಿದೆ.  ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1,15, 000 ರೂ. ಗಳಷ್ಟಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್