Publish Date: Wed, 06 Aug 2025 (11:00 IST)
Updated Date: Wed, 06 Aug 2025 (11:02 IST)
ಬೆಂಗಳೂರು: ಹಬ್ಬ ಹತ್ತಿರ ಬರುತ್ತಿದ್ದಂತೇ ಚಿನ್ನದ ದರವೂ ಗಗನಕ್ಕೇರುತ್ತಿದೆ. ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರದಲ್ಲಿ ಇಂದೂ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಆಷಾಢ ಕಳೆದು ಶ್ರಾವಣದ ಹಬ್ಬಕ್ಕೆ ಚಿನ್ನ ಖರೀದಿಸುವವರ ಸಂಖ್ಯೆಯೂ ಹೆಚ್ಚಿದೆ. ಆದರೆ ಬೆಲೆ ಮಾತ್ರ ಆಕಾಶದೆತ್ತರವಿದೆ. ಇಂದೂ ಪರಿಶುದ್ಧ ಚಿನ್ನ ಮತ್ತು ಇತರೆ ಚಿನ್ನದ ದರದಲ್ಲಿ ಏರಿಕೆಯಾಗಿದೆ. ಅದರಲ್ಲೂ ಪರಿಶುದ್ಧ ಚಿನ್ನದ ದರವಂತೂ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,03,080.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,03,225.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 11 ರೂ. ಏರಿಕೆಯಾಗಿದ್ದು 10,233 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 10 ರೂ. ಏರಿಕೆಯಾಗಿದ್ದು 9,380 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 8 ರೂ. ಏರಿಕೆಯಾಗಿದ್ದು 7,675 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ವಾರಂತ್ಯಕ್ಕೆ ಯಥಾಸ್ಥಿತಿಯಲ್ಲಿತ್ತು. ಇಂದು ಮತ್ತೆ ಬೆಳ್ಳಿ ದರದಲ್ಲಿ ಕೊಂಚ ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿ.ಗೆ 1,000 ರೂ. ಏರಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1,16, 000 ರೂ. ಗಳಷ್ಟಿದೆ.