Daily Horoscope

Select Your Language

Notifications

webdunia
webdunia
webdunia
webdunia

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿಯೇ ಚಿನ್ನದ ಬೆಲೆಯೂ ಗಗನಕ್ಕೇರಿದೆ. ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರದಲ್ಲಿ ಇಂದೂ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಬೆಲೆ ಮಾತ್ರ ಆಕಾಶದೆತ್ತರವಿದೆ. ಇಂದೂ ಪರಿಶುದ್ಧ ಚಿನ್ನ ಮತ್ತು ಇತರೆ ಚಿನ್ನದ ದರದಲ್ಲಿ ಏರಿಕೆಯಾಗಿದೆ. ಅದರಲ್ಲೂ ಪರಿಶುದ್ಧ ಚಿನ್ನದ ದರವಂತೂ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,03,225.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,03,630.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 22 ರೂ. ಏರಿಕೆಯಾಗಿದ್ದು 10,255 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 20 ರೂ. ಏರಿಕೆಯಾಗಿದ್ದು 9,400 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 16 ರೂ. ಏರಿಕೆಯಾಗಿದ್ದು 7,691 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ವಾರಂತ್ಯಕ್ಕೆ ಯಥಾಸ್ಥಿತಿಯಲ್ಲಿತ್ತು. ಇಂದು ಮತ್ತೆ ಬೆಳ್ಳಿ ದರದಲ್ಲಿ ಕೊಂಚ ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿ.ಗೆ 1,000 ರೂ. ಏರಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1,17, 000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾರಿಗೆ ನೌಕರರಿಗೆ ಸಂಬಳ ಕಟ್, ರೈತರಿಗೆ ಲಾಟಿ ಏಟು ಇದು ಯಾವ ನ್ಯಾಯ: ಆರ್ ಅಶೋಕ್