Publish Date: Sat, 09 Aug 2025 (11:08 IST)
Updated Date: Sat, 09 Aug 2025 (11:11 IST)
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಕಳೆದರೂ ಚಿನ್ನದ ಬೆಲೆ ಕಡಿಮೆಯಾಗಿಲ್ಲ. ಬದಲಾಗಿ ಇಂದು ಪರಿಶುದ್ಧ ಚಿನ್ನದ ಬೆಲೆ ದಾಖಲೆಯ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ಮೂರು-ನಾಲ್ಕು ದಿನಗಳಿಂದ ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಬೆಲೆ ಮಾತ್ರ ಆಕಾಶದೆತ್ತರವಿದೆ. ಇಂದೂ ಪರಿಶುದ್ಧ ಚಿನ್ನ ಮತ್ತು ಇತರೆ ಚಿನ್ನದ ದರದಲ್ಲಿ ಏರಿಕೆಯಾಗಿದೆ. ಅದರಲ್ಲೂ ಪರಿಶುದ್ಧ ಚಿನ್ನದ ದರವಂತೂ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,03,630.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,04,630.00 ರೂ.ಗಳಾಗಿದೆ.
ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 27 ರೂ. ಇಳಿಕೆಯಾಗಿದ್ದು 10,304 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 25 ರೂ. ಇಳಿಕೆಯಾಗಿದ್ದು 9,445 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 21 ರೂ. ಏರಿಕೆಯಾಗಿದ್ದು 7,728 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ಮೊನ್ನೆಯಷ್ಟೇ ಕೊಂಚ ಏರಿಕೆಯಾಗಿತ್ತು. ಆದರೆ ಎರಡು ದಿನಗಳಿಂದ ಬೆಳ್ಳಿ ದದರ ಯಥಾಸ್ಥಿತಿಯಲ್ಲಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1,17, 000 ರೂ. ಗಳಷ್ಟಿದೆ.