Daily Horoscope

Select Your Language

Notifications

webdunia
webdunia
webdunia
webdunia

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

Gold
ಬೆಂಗಳೂರು: ಕಳೆದ ವಾರ ಚಿನ್ನದ ಬೆಲೆ ಭಾರೀ ಏರಿಕೆಯಾಗಿತ್ತು. ಆದರೆ ನಿನ್ನೆಯಿಂದ ಚಿನ್ನದ ಬೆಲೆಯಲ್ಲಿ ಕೊಂಚವೇ ಇಳಿಕೆಯಾಗುತ್ತಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿತ್ತು. ಹಬ್ಬದ ಸಂದರ್ಭದಲ್ಲಿ ಬೆಲೆ ಮಾತ್ರ ಆಕಾಶದೆತ್ತರಕ್ಕೆ ತಲುಪಿತ್ತು. ಆದರೆ ಇಂದು ಪರಿಶುದ್ಧ ಚಿನ್ನ ಮತ್ತು ಇತರೆ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿದೆ. ಹಾಗಿದ್ದರೂ ಪರಿಶುದ್ಧ ಚಿನ್ನದ ದರದಲ್ಲಿ ಹೆಚ್ಚೇನೂ ವ್ಯತ್ಯಾಸವಾಗಿಲ್ಲ. ಪರಿಶುದ್ಧ ಚಿನ್ನದ ದರ ಮೊನ್ನೆ 1,04,125.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಇಳಿಕೆ ಕಂಡಿದ್ದು, 1,03,070.00   ರೂ.ಗಳಾಗಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 88 ರೂ. ಇಳಿಕೆಯಾಗಿದ್ದು 10,140 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 80 ರೂ. ಇಳಿಕೆಯಾಗಿದ್ದು 9,295 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 66 ರೂ. ಏರಿಕೆಯಾಗಿದ್ದು 7,605 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಎರಡು-ಮೂರು ದಿನಗಳಿಂದ ಬೆಳ್ಳಿ ದದರ ಯಥಾಸ್ಥಿತಿಯಲ್ಲಿದೆ. ಆದರೆ ಇಂದು 2,000 ರೂ.ಗಳಷ್ಟು ಇಳಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1,15, 000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು