ಬೆಂಗಳೂರು: ಕಳೆದ ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿತ್ತು. ಆದರೆ ಈ ವಾರಂತ್ಯಕ್ಕೆ ಕೊಂಚವೇ ಇಳಿಕೆಯಾಗುತ್ತಾ ಸಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರ ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿತ್ತು. ಹಬ್ಬದ ಸಂದರ್ಭದಲ್ಲಿ ಬೆಲೆ ಮಾತ್ರ ಆಕಾಶದೆತ್ತರಕ್ಕೆ ತಲುಪಿತ್ತು. ಇಂದು ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಏರಿಕೆಯಾಗಿದೆ. ಹಾಗಿದ್ದರೂ ಇತರೆ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿರುವುದು ಸಮಾಧಾನಕರ ಅಂಶವಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,02,710.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,02,800.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 43 ರೂ.ಗಳಷ್ಟು ಇಳಿಕೆಯಾಗಿದ್ದು 10,075 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 40 ರೂ.ಗಳಷ್ಟು ಇಳಿಕೆಯಾಗಿದ್ದು 9,235 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 33 ರೂ.ಗಳಷ್ಟು ಇಳಿಕೆಯಾಗಿದ್ದು 7,556 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ವಾರಂತ್ಯದಲ್ಲಿ ಕೊಂಚ ಏರಿಕೆಯಾಗಿತ್ತು. ವಾರದ ಆರಂಭದಲ್ಲಿ ಮತ್ತೆ ಏರುಗತಿಯಲ್ಲಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 100 ರೂ.ನಷ್ಟು ಏರಿಕೆಯಾಗಿದ್ದು 1,17,100 ರೂ. ಗಳಷ್ಟಿದೆ.