Publish Date: Thu, 21 Aug 2025 (11:29 IST)
Updated Date: Thu, 21 Aug 2025 (11:31 IST)
ಬೆಂಗಳೂರು: ಕಳೆದ ಮೂರು ದಿನಗಳಿಂದ ಚಿನ್ನದ ದರ ಇಳಿಕೆಯತ್ತ ಸಾಗಿತ್ತು. ಆದರೆ ಇಂದು ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ವಾರದ ಆರಂಭದಲ್ಲಿ ಚಿನ್ನದ ದರ ಇಳಿಕೆಯಾಗಿದ್ದು ಗ್ರಾಹಕರಿಗೆ ನೆಮ್ಮದಿ ತಂದಿತ್ತು. ಆದರೆ ಇಂದು ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಏರಿಕೆಯಾಗಿದೆ. ಇತರೆ ಚಿನ್ನದ ದರದಲ್ಲೂ ಕೊಂಚ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,01,9500.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,02,370.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 60 ರೂ.ಗಳಷ್ಟು ಏರಿಕೆಯಾಗಿದ್ದು 10,075 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 50 ರೂ.ಗಳಷ್ಟು ಏರಿಕೆಯಾಗಿದ್ದು 9,230 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 41 ರೂ.ಗಳಷ್ಟು ಏರಿಕೆಯಾಗಿದ್ದು 7,552 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ವಾರಂತ್ಯದಲ್ಲಿ ಕೊಂಚ ಏರಿಕೆಯಾಗಿತ್ತು. ವಾರದ ಆರಂಭದಲ್ಲಿ ಮತ್ತೆ ಏರುಗತಿಯಲ್ಲಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1000 ರೂ.ನಷ್ಟು ಏರಿಕೆಯಾಗಿದ್ದು 1,16,000 ರೂ. ಗಳಷ್ಟಿದೆ.