Publish Date: Fri, 22 Aug 2025 (10:56 IST)
Updated Date: Fri, 22 Aug 2025 (10:58 IST)
ಬೆಂಗಳೂರು: ಗೌರಿ ಗಣೇಶ ಹಬ್ಬ ಹತ್ತಿರ ಬರುತ್ತಿದ್ದಂತೇ ಚಿನ್ನದ ಬೆಲೆ ಮತ್ತೆ ಏರುಗತಿಯಲ್ಲಿ ಸಾಗುತ್ತಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ವಾರದ ಆರಂಭದಲ್ಲಿ ಚಿನ್ನದ ದರ ಇಳಿಕೆಯಾಗಿದ್ದು ಗ್ರಾಹಕರಿಗೆ ನೆಮ್ಮದಿ ತಂದಿತ್ತು. ಆದರೆ ಈಗ ಪರಿಶುದ್ಧಚಿನ್ನದ ದರ ಮತ್ತೆ ಏರುಗತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಏರಿಕೆಯಾಗಿದೆ. ಇತರೆ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,01.370.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,02.430.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 22 ರೂ.ಗಳಷ್ಟು ಇಳಿಕೆಯಾಗಿದ್ದು 10,053 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 15 ರೂ.ಗಳಷ್ಟು ಇಳಿಕೆಯಾಗಿದ್ದು 9,215 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 12 ರೂ.ಗಳಷ್ಟು ಇಳಿಕೆಯಾಗಿದ್ದು 7,540 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ವಾರಂತ್ಯದಲ್ಲಿ ಕೊಂಚ ಏರಿಕೆಯಾಗಿತ್ತು. ವಾರದ ಆರಂಭದಲ್ಲಿ ಮತ್ತೆ ಏರುಗತಿಯಲ್ಲಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 2000 ರೂ.ನಷ್ಟು ಏರಿಕೆಯಾಗಿದ್ದು 1,18,000 ರೂ. ಗಳಷ್ಟಿದೆ.