Daily Horoscope

Select Your Language

Notifications

webdunia
webdunia
webdunia
webdunia

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Gold
ಬೆಂಗಳೂರು: ಚಿನ್ನದ ಬೆಲೆ ಈಗ ಶಾಕಿಂಗ್ ಎನ್ನುವಷ್ಟು ಏರಿಕೆಯಾಗುತ್ತಿದೆ. ಇಂದೂ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರದ ಆರಂಭದಲ್ಲಿ ಚಿನ್ನದ ದರ ಇಳಿಕೆಯಾಗಿದ್ದು ಗ್ರಾಹಕರಿಗೆ ನೆಮ್ಮದಿ ತಂದಿತ್ತು. ಆದರೆ ಈಗ ಪರಿಶುದ್ಧಚಿನ್ನದ ದರ ಮತ್ತು ಇತರೆ ಚಿನ್ನದ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.  ಇಂದು ಇತರೆ ಚಿನ್ನದ ದರವೂ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,05.260.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,05.670.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 164 ರೂ.ಗಳಷ್ಟು ಏರಿಕೆಯಾಗಿದ್ದು 10,495 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 150 ರೂ.ಗಳಷ್ಟು ಏರಿಕೆಯಾಗಿದ್ದು 9,620 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 123 ರೂ.ಗಳಷ್ಟು ಏರಿಕೆಯಾಗಿದ್ದು 7,871 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿದರವಂತೂ ಮೊನ್ನೆ ದಾಖಲೆಯ ಮಟ್ಟಿಕ್ಕೆ ಏರಿಕೆಯಾಗಿತ್ತು. ಇಂದೂ ಬೆಳ್ಳಿ ದರ 1,000 ರೂ.ಗಳಷ್ಟು ಏರಿಕೆಯಾಗಿದ್ದು ಇಂದು ಪ್ರತೀ ಕೆ.ಜಿಗೆ 1,21,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಷ್ಣುವರ್ಧನ್ ಸಮಾಧಿ ಬಗ್ಗೆ ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ