Publish Date: Tue, 02 Sep 2025 (10:55 IST)
Updated Date: Tue, 02 Sep 2025 (10:57 IST)
ಬೆಂಗಳೂರು: ಅಮೆರಿಕಾದ ಸುಂಕ ನೀತಿಯಿಂದಾಗಿ ಭಾರತದಲ್ಲೂ ಚಿನ್ನದ ಬೆಲೆ ಮೆಲೆ ಪರಿಣಾಮ ಬೀರುತ್ತಿದೆ. ಇಂದು ಪರಿಶುದ್ಧ ಚಿನ್ನದ ದರ ಸರ್ವಕಾಲಿಕ ಏರಿಕೆಯಾಗಿದ್ದರೆ ಇತರೆ ಚಿನ್ನದ ದರವೂ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರದ ಮಧ್ಯಭಾಗದಿಂದ ಚಿನ್ನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಈಗ ಪರಿಶುದ್ಧಚಿನ್ನದ ದರ ಮತ್ತು ಇತರೆ ಚಿನ್ನದ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇಂದು ಇತರೆ ಚಿನ್ನದ ದರವೂ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,06.830.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,07.550.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 21 ರೂ.ಗಳಷ್ಟು ಏರಿಕೆಯಾಗಿದ್ದು 10,609 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 20 ರೂ.ಗಳಷ್ಟು ಏರಿಕೆಯಾಗಿದ್ದು 9,725 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 16 ರೂ.ಗಳಷ್ಟು ಏರಿಕೆಯಾಗಿದ್ದು 7,957 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರವೂ ನಿನ್ನೆ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಇಂದೂ ಮತ್ತೆ ಬೆಳ್ಳಿ ದರ 100 ರೂ.ಗಳಷ್ಟು ಏರಿಕೆಯಾಗಿದ್ದು ಇಂದು ಪ್ರತೀ ಕೆ.ಜಿಗೆ 1,26,100 ರೂ. ಗಳಷ್ಟಿದೆ.