Daily Horoscope

Select Your Language

Notifications

webdunia
webdunia
webdunia
webdunia

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold
ಬೆಂಗಳೂರು: ಚಿನ್ನದ ಬೆಲೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇಂದಂತೂ ಪರಿಶುದ್ಧ ಚಿನ್ನದ ಸರ್ವಕಾಲಿಕ ದಾಖಲೆ ಮಾಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಚಿನ್ನದ ದರ ಕೇಳಿದರೆ ಈಗ ಶಾಕ್ ಹೊಡೆಯುವಂತಹ ಪರಿಸ್ಥಿತಿ. ಮಧ್ಯಮ ವರ್ಗದವರಿಗಂತೂ ಚಿನ್ನ ಈಗ ಗಗನ ಕುಸುಮ. ಈಗ ಪರಿಶುದ್ಧಚಿನ್ನದ ದರ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ.  ಆದರೆ ಇತರೆ ಚಿನ್ನದ ದದರ ಕೊಂಚ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,09.450.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,09.845.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 87 ರೂ.ಗಳಷ್ಟು ಏರಿಕೆಯಾಗಿದ್ದು 10,849 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 80 ರೂ.ಗಳಷ್ಟು ಏರಿಕೆಯಾಗಿದ್ದು 9,945 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 65 ರೂ.ಗಳಷ್ಟು ಏರಿಕೆಯಾಗಿದ್ದು 8,137 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರವೂ ಮೊನ್ನೆ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿತ್ತು. ಆದರೆ ಇಂದು ಮತ್ತೆ ಬೆಳ್ಳಿ ದರ ಇಳಿಕೆಯಾಗಿದ್ದು ಪ್ರತೀ ಕೆ.ಜಿಗೆ 1,25,900 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಂಕುಮ ಕಂಡರೆ ಭಯ ಆಗುತ್ತೆ, ಟೋಪಿ ಹಾಕಲು ಖುಷಿಯಾಗುತ್ತಾ: ಸಿದ್ದರಾಮಯ್ಯ ಟ್ರೋಲ್