Publish Date: Thu, 18 Sep 2025 (11:46 IST)
Updated Date: Thu, 18 Sep 2025 (11:48 IST)
ಬೆಂಗಳೂರು: ಸತತ ಏರಿಕೆಯ ನಂತರ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿರುವುದು ಸಮಾಧಾನ ತಂದಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿದ್ದು ದಾಖಲೆಯ ಮಟ್ಟಕ್ಕೆ ತಲುಪಿದೆ. ಈಗಂತೂ ಮಧ್ಯಮ ವರ್ಗದವರಿಗೆ ಚಿನ್ನ ಕೊಳ್ಳುವುದು ಕನಸೇ ಎಂಬಂತಾಗಿದೆ. ಆದರೆ ನಿನ್ನೆ ಇತರೆ ಚಿನ್ನದ ಬೆಲೆಯಲ್ಲಿ ಸ್ವಲ್ಪವೇ ಇಳಿಕೆ ಕಂಡುಬಂದಿತ್ತು. ಆದರೆ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿತ್ತು. ಆದರೆ ಇಂದು ಎರಡೂ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ1,14.375.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಇಳಿಕೆ ಕಂಡಿದ್ದು, 1,13.400.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 54 ರೂ.ಗಳಷ್ಟು ಇಳಿಕೆಯಾಗಿದ್ದು 11,117 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 50 ರೂ.ಗಳಷ್ಟು ಇಳಿಕೆಯಾಗಿದ್ದು 10,190 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 40 ರೂ.ಗಳಷ್ಟು ಇಳಿಕೆಯಾಗಿದ್ದು 8,338 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಸ್ವಲ್ಪ ಇಳಿಕೆ ಕಂಡಿತ್ತು. ಇಂದು ಮತ್ತಷ್ಟು ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ 1,000 ರೂ.ಗಳಷ್ಟು ಇಳಿಕೆಯಾಗಿದ್ದು ಬೆಳ್ಳಿ ದರ 1,31,000 ರೂ. ಗಳಷ್ಟಿದೆ.