Publish Date: Mon, 22 Sep 2025 (12:14 IST)
Updated Date: Mon, 22 Sep 2025 (12:16 IST)
ಬೆಂಗಳೂರು: ವಾರದ ಆರಂಭದಲ್ಲೇ ಗ್ರಾಹಕರಿಗೆ ಚಿನ್ನದ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿದ್ದು ದಾಖಲೆಯ ಮಟ್ಟಕ್ಕೆ ತಲುಪಿದೆ. ಈಗಂತೂ ಮಧ್ಯಮ ವರ್ಗದವರಿಗೆ ಚಿನ್ನ ಕೊಳ್ಳುವುದು ಕನಸೇ ಎಂಬಂತಾಗಿದೆ. ಆದರೆ ಮೊನ್ನೆ ಚಿನ್ನದ ಬೆಲೆಯಲ್ಲಿ ಸ್ವಲ್ಪವೇ ಇಳಿಕೆ ಕಂಡುಬಂದಿತ್ತು. ಆದರೆ ಇಂದು ಮತ್ತೆ ಇತರೆ ಚಿನ್ನದ ದರ ಕೊಂಚ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ1,13.095.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,14.110.00 ರೂ.ಗಳಾಗಿದೆ.
ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 43 ರೂ.ಗಳಷ್ಟು ಏರಿಕೆಯಾಗಿದ್ದು 11,258 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 40 ರೂ.ಗಳಷ್ಟು ಏರಿಕೆಯಾಗಿದ್ದು 10,320 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 33 ರೂ.ಗಳಷ್ಟು ಏರಿಕೆಯಾಗಿದ್ದು 8,444 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ಮೊನ್ನೆ ಕೊಂಚ ಏರಿಕೆಯಾಗಿತ್ತು. ಆದರೆ ಇಂದಂತೂ ಭಾರೀ ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ 3,000 ರೂ.ಗಳಷ್ಟು ಏರಿಕೆಯಾಗಿದ್ದು ಬೆಳ್ಳಿ ದರ 1,38,000 ರೂ. ಗಳಷ್ಟಿದೆ.