Daily Horoscope

Select Your Language

Notifications

webdunia
webdunia
webdunia
webdunia

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Gold
ಬೆಂಗಳೂರು: ವಾರದ ಆರಂಭದಲ್ಲೇ ಗ್ರಾಹಕರಿಗೆ ಚಿನ್ನದ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇಂದಂತೂ ಚಿನ್ನದ ಬೆಲೆ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿದ್ದು ದಾಖಲೆಯ ಮಟ್ಟಕ್ಕೆ ತಲುಪಿದೆ. ಈಗಂತೂ ಮಧ್ಯಮ ವರ್ಗದವರಿಗೆ ಚಿನ್ನ ಕೊಳ್ಳುವುದು ಕನಸೇ ಎಂಬಂತಾಗಿದೆ. ಆದರೆ ಮೊನ್ನೆ ಚಿನ್ನದ ಬೆಲೆಯಲ್ಲಿ ಸ್ವಲ್ಪವೇ ಇಳಿಕೆ ಕಂಡುಬಂದಿತ್ತು. ಆದರೆ ಇಂದು ಮತ್ತೆ ಚಿನ್ನದ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ1,14.110.00 ರೂ.ಗಳಷ್ಟಿತ್ತು. ಆದರೆ ಇಂದು ಭಾರೀ ಏರಿಕೆ ಕಂಡಿದ್ದು, 1,15.450.00 ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 126 ರೂ.ಗಳಷ್ಟು ಏರಿಕೆಯಾಗಿದ್ದು 11,433 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 115 ರೂ.ಗಳಷ್ಟು ಏರಿಕೆಯಾಗಿದ್ದು 10,480 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 94 ರೂ.ಗಳಷ್ಟು ಏರಿಕೆಯಾಗಿದ್ದು 8,575 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಕೊಂಚ ಏರಿಕೆಯಾಗಿತ್ತು. ಆದರೆ ಇಂದಂತೂ ಭಾರೀ ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ 1,000 ರೂ.ಗಳಷ್ಟು ಏರಿಕೆಯಾಗಿದ್ದು ಬೆಳ್ಳಿ ದರ 1,39,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ