Publish Date: Wed, 01 Oct 2025 (10:17 IST)
Updated Date: Wed, 01 Oct 2025 (10:19 IST)
ಬೆಂಗಳೂರು: ದಸರಾ ಹಬ್ಬದ ಸಂದರ್ಭದಲ್ಲಿ ಚಿನ್ನದ ಬೆಲೆ ಮತ್ತಷ್ಟು ದುಬಾರಿಯಾಗಿದೆ. ವಾರಂತ್ಯಕ್ಕೆ ಹೋಲಿಸಿದರೆ ಈ ವಾರ ಚಿನ್ನದ ದರ ಮತ್ತಷ್ಟು ಏರಿಕೆಯಾಗುತ್ತಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿದ್ದು ದಾಖಲೆಯ ಮಟ್ಟಕ್ಕೆ ತಲುಪಿದೆ. ಈಗಂತೂ ಮಧ್ಯಮ ವರ್ಗದವರಿಗೆ ಚಿನ್ನ ಕೊಳ್ಳುವುದು ಕನಸೇ ಎಂಬಂತಾಗಿದೆ. ಅದರಲ್ಲೂ ಈಗ ಹಬ್ಬದ ಸೀಸನ್ ಆಗಿರುವುದರಿಂದ ಚಿನ್ನ ಕೊಳ್ಳುವವರ ಸಂಖ್ಯೆಯೂ ಹೆಚ್ಚು. ಇಂತಹ ಸಂದರ್ಭದಲ್ಲೇ ಚಿನ್ನದ ಬೆಲೆಯೂ ಗಗನಕ್ಕೇರಿದೆ. ಪರಿಶುದ್ಧ ಚಿನ್ನದ ಬೆಲೆ ಮಾತ್ರ ಇಂದು ಕೊಂಚ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ1,18.885.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಇಳಿಕೆ ಕಂಡಿದ್ದು, 1,18.755.00 ರೂ.ಗಳಾಗಿದೆ.
ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 120 ರೂ.ಗಳಷ್ಟು ಏರಿಕೆಯಾಗಿದ್ದು 11,864 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 110 ರೂ.ಗಳಷ್ಟು ಏರಿಕೆಯಾಗಿದ್ದು 10,875 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 90 ರೂ.ಗಳಷ್ಟು ಏರಿಕೆಯಾಗಿದ್ದು 8,898 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಭಾರೀ ಏರಿಕೆಯಾಗಿತ್ತು. ಆದರೆ ಇಂದು ಯಥಾಸ್ಥಿತಿ ಕಾಪಾಡಿಕೊಂಡಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 1,51,000 ರೂ. ಗಳಷ್ಟಿದೆ.