Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Krishnaveni K
ಗುರುವಾರ, 9 ಅಕ್ಟೋಬರ್ 2025 (11:35 IST)
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನ ಬಾಕಿಯಿದ್ದು ಚಿನ್ನದ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದು ಮತ್ತೆ ಚಿನ್ನದ ದರ ದುಬಾರಿಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿದ್ದು ದಾಖಲೆಯ ಮಟ್ಟಕ್ಕೆ ತಲುಪಿದೆ. ಈಗಂತೂ ಮಧ್ಯಮ ವರ್ಗದವರಿಗೆ ಚಿನ್ನ ಕೊಳ್ಳುವುದು ಕನಸೇ ಎಂಬಂತಾಗಿದೆ. ಅದರಲ್ಲೂ ಈಗ ಹಬ್ಬದ ಸೀಸನ್ ಆಗಿರುವುದರಿಂದ ಚಿನ್ನ ಕೊಳ್ಳುವವರ ಸಂಖ್ಯೆಯೂ ಹೆಚ್ಚು. ಇಂತಹ ಸಂದರ್ಭದಲ್ಲೇ ಚಿನ್ನದ ಬೆಲೆಯೂ ಗಗನಕ್ಕೇರಿದೆ. ಪರಿಶುದ್ಧ ಚಿನ್ನ ಮತ್ತು ಇತರೆ ಚಿನ್ನದ ದರ ಸದ್ಯಕ್ಕಂತೂ ಇಳಿಕೆಯಾಗುವ ಲಕ್ಷಣವೇ ಕಾಣುತ್ತಿಲ್ಲ. ಒಂದು ವೇಳೆ ಇಳಿಕೆಯಾದರೂ ಹೆಚ್ಚೇನೂ ಇಳಿಕೆಯಾಗಲ್ಲ ಎಂದು ಮಾರುಕಟ್ಟೆ ತಜ್ಞರೇ ಹೇಳುತ್ತಿದ್ದಾರೆ. ಪರಿಶುದ್ಧ ಚಿನ್ನದ ದರ ನಿನ್ನೆ 1,23.940.00 ರೂ.ಗಳಿತ್ತು. ಆದರೆ ಇಂದು ದಾಖಲೆಯ ಮೊತ್ತಕ್ಕೆ ಏರಿಕೆಯಾಗಿದ್ದು 1,26.080.00  ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 22 ರೂ. ಏರಿಕೆಯಾಗಿದ್ದು 12,415 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 20 ರೂ. ಏರಿಕೆಯಾಗಿದ್ದು 11,380 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 16 ರೂ.ಗಳಷ್ಟು ಏರಿಕೆಯಾಗಿದ್ದು 9,311 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರವೂ ಈಗ ದಾಖಲೆಯ ಮಟ್ಟದಲ್ಲೇ ಇದೆ. ಇಂದಂತೂ ಬೆಲೆ ಗಗನಕ್ಕೇರಿದ್ದು 4,000 ರೂ. ಏರಿಕೆಯಾಗಿದ್ದು ಪ್ರತೀ ಕೆ.ಜಿಗೆ ಬೆಳ್ಳಿ ದರ 1,61,000 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments