Publish Date: Tue, 21 Oct 2025 (10:25 IST)
Updated Date: Tue, 21 Oct 2025 (10:28 IST)
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿನ್ನದ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದು ಬೆಲೆ ದಾಖಲೆಯ ಮಟ್ಟಕ್ಕೆ ತಲುಪಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿದ್ದು ದಾಖಲೆಯ ಮಟ್ಟಕ್ಕೆ ತಲುಪಿದೆ. ಈಗಂತೂ ಮಧ್ಯಮ ವರ್ಗದವರಿಗೆ ಚಿನ್ನ ಕೊಳ್ಳುವುದು ಕನಸೇ ಎಂಬಂತಾಗಿದೆ. ಅದರಲ್ಲೂ ಈಗ ಹಬ್ಬದ ಸೀಸನ್ ಆಗಿರುವುದರಿಂದ ಚಿನ್ನ ಕೊಳ್ಳುವವರ ಸಂಖ್ಯೆಯೂ ಹೆಚ್ಚು. ಇಂತಹ ಸಂದರ್ಭದಲ್ಲೇ ಚಿನ್ನದ ಬೆಲೆಯೂ ಗಗನಕ್ಕೇರಿದೆ. ಚಿನ್ನದ ದರ ಸದ್ಯಕ್ಕಂತೂ ಇಳಿಕೆಯಾಗುವ ಲಕ್ಷಣವೇ ಕಾಣುತ್ತಿಲ್ಲ. ಆದರೆ ಇಂದು ಕೊಂಚ ಇಳಿಕೆಯಾಗಿದ್ದು1,31.520.00 ರೂ.ಗಳಾಗಿದೆ.
ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 208 ರೂ. ಏರಿಕೆಯಾಗಿದ್ದು 13, 277 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 190 ರೂ. ಏರಿಕೆಯಾಗಿದ್ದು 12,170 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 156 ರೂ. ಏರಿಕೆಯಾಗಿದ್ದು 9,958 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರವೂ ಈಗ ದಾಖಲೆಯ ಮಟ್ಟಕ್ಕೆ ತಲುಪಿತ್ತು. ಆದರೆ ಇಂದು ಭಾರೀ ಇಳಿಕೆಯಾಗಿದೆ ಇಂದು 1,000 ರೂ. ಇಳಿಕೆಯಾಗಿದ್ದು ಪ್ರತೀ ಕೆ.ಜಿಗೆ ಬೆಳ್ಳಿ ದರ 1,70,000 ರೂ. ಗಳಷ್ಟಿದೆ.