ಬೆಂಗಳೂರು: ದೀಪಾವಳಿ ಹಬ್ಬ ಮುಗಿದ ಬೆನ್ನಲ್ಲೇ ಪರಿಶುದ್ಧ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿರುವುದು ಗ್ರಾಹಕರಿಗೆ ನೆಮ್ಮದಿ ತಂದಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಮೊನ್ನೆಯಿಂದ ಚಿನ್ನದ ದರ ಭಾರೀ ಏರಿಕೆಯಾಗುತ್ತಲೇ ಇತ್ತು. ಹಬ್ಬದ ಸಂದರ್ಭದಲ್ಲಿ ಚಿನ್ನ ಖರೀದಿಸುವವರ ಸಂಖ್ಯೆಯೂ ಹೆಚ್ಚಾಗಿತ್ತು. ಆದರೆ ಈಗ ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಹಾಗಿದ್ದರೂ ಹೆಚ್ಚೇನೂ ಇಳಿಕೆಯಾಗಿಲ್ಲ. ನಿನ್ನೆ ಪರಿಶುದ್ಧ ಚಿನ್ನದ ದರ 1,27,000.00 ರೂ.ಗಳಿತ್ತು. ಇಂದು ಮತ್ತಷ್ಟು ಇಳಿಕೆಯಾಗಿದ್ದು 1,25,145.00 ರೂ.ಗಳಷ್ಟಾಗಿದೆ.
ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 82 ರೂ. ಇಳಿಕೆಯಾಗಿದ್ದು 12,246 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 75 ರೂ. ಇಳಿಕೆಯಾಗಿದ್ದು 11,225 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 62 ರೂ. ಇಳಿಕೆಯಾಗಿದ್ದು 9,186 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರವೂ ಈಗ ಇಳಿಕೆಯತ್ತ ಸಾಗಿದೆ. ಇಂದು ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಪ್ರತೀ ಕೆ.ಜಿಗೆ ಬೆಳ್ಳಿ ದರ 1,54,000 ರೂ. ಗಳಷ್ಟಿದೆ.