Daily Horoscope

Select Your Language

Notifications

webdunia
webdunia
webdunia
webdunia

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold
ಬೆಂಗಳೂರು: ಸತತ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ ಈಗ ಕೊಂಚ ಇಳಿಕೆಯತ್ತ ಸಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದ್ದರೆ 18,22, 24 ಕ್ಯಾರೆಟ್ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಮೊನ್ನೆಯಿಂದ ಚಿನ್ನದ ದರದಲ್ಲಿಇಳಿಕೆ ಮತ್ತು ಏರಿಕೆ ಆಗುತ್ತಲೇ ಇದೆ. ಆದರೂ ಕಳೆದ ಕೆಲವು ದಿನಗಳಿಂದ ಚಿನ್ನ ಖರೀದಿದಾರರು ಸ್ವಲ್ಪ ನೆಮ್ಮದಿ ಪಡಬಹುದಾದಷ್ಟು ಇಳಿಕೆಯಾಗುತ್ತಿದೆ. ಆದರೆ ಇಂದು ಪರಿಶುದ್ಧ ಚಿನ್ನದ ದರ ಕೊಂಚ ಏರಿಕೆಯಾಗಿದೆ. ನಿನ್ನೆ ಪರಿಶುದ್ಧ ಚಿನ್ನದ ದರ 1,23,660.00 ರೂ.ಗಳಿತ್ತು. ಇಂದು ಮತ್ತೆ ಏರಿಕೆಯಾಗಿದ್ದು 1,25,380.00 ರೂ.ಗಳಷ್ಟಾಗಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 28 ರೂ. ಇಳಿಕೆಯಾಗಿದ್ದು 12,300 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 25 ರೂ. ಇಳಿಕೆಯಾಗಿದ್ದು 11,275 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 21 ರೂ. ಇಳಿಕೆಯಾಗಿದ್ದು 9,225 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರವೂ ಈಗ ಇಳಿಕೆಯತ್ತ ಸಾಗಿದೆ. ನಿನ್ನೆ ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿತ್ತು. ಆದರೆ ಪ್ರತೀ ಕೆ.ಜಿಗೆ ಬೆಳ್ಳಿ ದರ ಇಂದು 1,000 ರೂ. ಏರಿಕೆಯಾಗಿದೆ. ಇಂದು 1,52,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್