Daily Horoscope

Select Your Language

Notifications

webdunia
webdunia
webdunia
webdunia

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Gold
ಬೆಂಗಳೂರು: ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆ ಸೂಚಿಸುತ್ತಿದೆ. ಪರಿಶುದ್ಧ ಚಿನ್ನದ ದರ ಮತ್ತು 18,22, 24 ಕ್ಯಾರೆಟ್ ಚಿನ್ನದ ದರ ಇಂದು ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡುಬಂದಿತ್ತು. ಆದರೆ ಇಂದು ಪರಿಶುದ್ಧ ಚಿನ್ನದ ದರ ಕೊಂಚ ಏರಿಕೆಯಾಗಿದೆ. ಮೊನ್ನೆ ಪರಿಶುದ್ಧ ಚಿನ್ನದ ದರ 1,23,660.00 ರೂ.ಗಳಿತ್ತು. ಇಂದು ಮತ್ತೆ ಏರಿಕೆಯಾಗಿದ್ದು 1,24,525.00 ರೂ.ಗಳಷ್ಟಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 17 ರೂ. ಏರಿಕೆಯಾಗಿದ್ದು 12,317 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 15 ರೂ. ಏರಿಕೆಯಾಗಿದ್ದು 11,290 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 13 ರೂ. ಏರಿಕೆಯಾಗಿದ್ದು 9,238 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಕಳೆದ ವಾರ ಇಳಿಕೆಯತ್ತ ಸಾಗಿತ್ತು. ಆದರೆ ಇಂದು ವಾರದ ಆರಂಭದಲ್ಲೇ ಕೊಂಚ ಏರಿಕೆ ಕಂಡಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 3,000 ರೂ. ಏರಿಕೆಯಾಗಿದ್ದು 1,54,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವೀರಪ್ಪನ್ ಆಗಿದ್ದಾಗ ಕಾಡು ಸೇಫ್ ಆಗಿತ್ತು: ಅರಣ್ಯ ಸಚಿವರಿಗೆ ರೈತರ ಅಳಲು