Daily Horoscope

Select Your Language

Notifications

webdunia
webdunia
webdunia
webdunia

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Gold
ಬೆಂಗಳೂರು: ಈ ವಾರ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡುಬಂದಿತ್ತು. ಇದರ ನಡುವೆ ಪರಿಶುದ್ಧ ಚಿನ್ನದ ದರ ಕೊಂಚ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇತ್ತು. ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರ 1,24,370.00 ರೂ.ಗಳಿತ್ತು. ಇಂದು ಮತ್ತೆ ಇಳಿಕೆಯಾಗಿದ್ದು 1,24,365.00 ರೂ.ಗಳಷ್ಟಾಗಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ ಪ್ರತೀ ಗ್ರಾಂಗೆ 120 ರೂ. ಏರಿಕೆಯಾಗಿದ್ದು 12,332 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ 110 ರೂ. ಏರಿಕೆಯಾಗಿದ್ದು 11,295 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 90 ರೂ. ಏರಿಕೆಯಾಗಿದ್ದು 9,242 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಕಳೆದ ವಾರ ಏರಿಕೆಯತ್ತ ಸಾಗಿತ್ತು. ಈ ವಾರದ ಅರಂಭದಲ್ಲೇ ಬೆಳ್ಳಿ ದರ 2600 ರೂ.ಗಳಷ್ಟು ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 1,55,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಮಾತ್ರವಲ್ಲ ದುಡ್ಡು ಕೊಟ್ರೆ ಇದೆಲ್ಲಾ ಸಿಗುತ್ತೆ: video