Publish Date: Sat, 15 Nov 2025 (11:20 IST)
Updated Date: Sat, 15 Nov 2025 (11:22 IST)
ಬೆಂಗಳೂರು: ಈ ವಾರ ಆರಂಭದಲ್ಲೇ ಚಿನ್ನದ ದರ ಏರಿಕೆಯತ್ತ ಸಾಗಿತ್ತು. ಆದರೆ ಇಂದು ವಾರಂತ್ಯಕ್ಕೆ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದೆರ ಈಗ ಚಿನ್ನದ ದರ ಮತ್ತೆ ದಾಖಲೆಯತ್ತ ದಾಪುಗಾಲಿಡುತ್ತಿದೆ. ಇದರ ನಡುವೆ ಪರಿಶುದ್ಧ ಚಿನ್ನದ ದರ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇತ್ತು. ಆದರೆ ಇಂದು ಕೊಂಚ ಇಳಿಕೆ ಕಂಡಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,30,905.00 ರೂ.ಗಳಿತ್ತು. ಇಂದು ಭಾರೀ ಇಳಿಕೆಯಾಗಿದ್ದು 1,29,260.00 ರೂ.ಗಳಷ್ಟಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ ಪ್ರತೀ ಗ್ರಾಂಗೆ 196 ರೂ. ಇಳಿಕೆಯಾಗಿದ್ದು 12,508 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ 180 ರೂ. ಇಳಿಕೆಯಾಗಿದ್ದು 11,465 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 147 ರೂ. ಇಳಿಕೆಯಾಗಿದ್ದು 9,381 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ಈ ವಾರವೂ ಏರುಗತಿಯಲ್ಲೇ ಇತ್ತು. ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ 4000 ರೂ.ಗಳಷ್ಟು ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 1,69,000 ರೂ. ಗಳಷ್ಟಿದೆ.