ಬೆಂಗಳೂರು: ವಾರದ ಆರಂಭದಲ್ಲೇ ಚಿನ್ನದ ದರ ಇಳಿಕೆಯಾಗಿದೆ. ಇದು ಗ್ರಾಹಕರಿಗೆ ವಾರದ ಆರಂಭದಲ್ಲೇ ಆಶಾಭಾವನೆ ಮೂಡಿಸಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಮತ್ತೆ ದಾಖಲೆಯತ್ತ ದಾಪುಗಾಲಿಡುತ್ತಿತ್ತು. ನಿನ್ನೆ ಚಿನ್ನದ ದರ ಏರಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಏರುಗತಿಯಲ್ಲೇ ಇದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,26,885.00 ರೂ.ಗಳಿತ್ತು. ಇಂದು 1,27,650.00 ರೂ.ಗಳಷ್ಟಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ ಪ್ರತೀ ಗ್ರಾಂಗೆ 17 ರೂ. ಇಳಿಕೆಯಾಗಿದ್ದು 12,469 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ 15 ರೂ. ಇಳಿಕೆಯಾಗಿದ್ದು 11,430 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 12 ರೂ. ಇಳಿಕೆಯಾಗಿದ್ದು 9,352 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ 3000 ರೂ.ಗಳಷ್ಟು ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 1,65,000 ರೂ. ಗಳಷ್ಟಿದೆ.