Publish Date: Tue, 23 Dec 2025 (11:57 IST)
Updated Date: Tue, 23 Dec 2025 (11:58 IST)
ಬೆಂಗಳೂರು: ಚಿನ್ನದ ಬೆಲೆ ಪ್ರತಿನಿತ್ಯ ಏರಿಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಭಾರೀ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರವೂ ಇದೇ ಟ್ರೆಂಡ್ ಮುಂದುವರಿಯುವ ಲಕ್ಷಣವಿದೆ. ಇಂದು ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,36,535.00 ರೂ.ಗಳಿತ್ತು. ಇಂದು 1,38,540.00 ರೂ.ಗಳಷ್ಟಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಭಾರೀ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 240 ರೂ.ಗಳಷ್ಟು ಏರಿಕೆಯಾಗಿದ್ದು 13,855 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ 220 ರೂ.ಗಳಷ್ಟು ಏರಿಕೆಯಾಗಿದ್ದು 12,700 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 180 ರೂ. ಗಳಷ್ಟು ಏರಿಕೆಯಾಗಿದ್ದು 10,391 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 3000 ರೂ.ಗಳಷ್ಟು ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,23,000 ರೂ. ಗಳಷ್ಟಿದೆ.