Publish Date: Thu, 01 Jan 2026 (09:15 IST)
Updated Date: Thu, 01 Jan 2026 (09:16 IST)
ಬೆಂಗಳೂರು: ಹೊಸ ವರ್ಷದ ಮೊದಲ ದಿನವೇ ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಇಳಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರ ಆರಂಭದಿಂದಲೇ ಇಳಿಕೆಯತ್ತ ಸಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತಷ್ಟು ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,39,095.00 ರೂ.ಗಳಿತ್ತು. ಇಂದು 1,37,095.00 ರೂ.ಗಳಷ್ಟಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 10 ರೂ.ಗಳಷ್ಟು ಇಳಿಕೆಯಾಗಿದ್ದು 13,488 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ 91 ರೂ.ಗಳಷ್ಟು ಇಳಿಕೆಯಾಗಿದ್ದು 12,364 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 75 ರೂ. ಗಳಷ್ಟು ಇಳಿಕೆಯಾಗಿದ್ದು 10,116 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 1100 ರೂ.ಗಳಷ್ಟು ಇಳಿಕೆಯಾಗಿದೆ. ಪ್ರತೀ ಕೆ.ಜಿಗೆ ಬೆಳ್ಳಿ ದರ 2,38,900 ರೂ. ಗಳಷ್ಟಿದೆ.