Publish Date: Tue, 06 Jan 2026 (12:18 IST)
Updated Date: Tue, 06 Jan 2026 (12:19 IST)
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರ ಆರಂಭದಿಂದಲೇ ಇಳಿಕೆಯತ್ತ ಸಾಗಿತ್ತು. ಆದರೆ ಇಂದು ಪರಿಶುದ್ಧ ಚಿನ್ನದ ದರ ಕೊಂಚ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,38,135.00 ರೂ.ಗಳಿತ್ತು. ಇಂದು 1,40,005.00 ರೂ.ಗಳಷ್ಟಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 60 ರೂ.ಗಳಷ್ಟು ಏರಿಕೆಯಾಗಿದ್ದು 13,882 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ 55 ರೂ.ಗಳಷ್ಟು ಏರಿಕೆಯಾಗಿದ್ದು 12,725 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 45 ರೂ. ಗಳಷ್ಟು ಏರಿಕೆಯಾಗಿದ್ದು 10,412 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 6000 ರೂ.ಗಳಷ್ಟು ಏರಿಕೆಯಾಗಿದೆ. ಪ್ರತೀ ಕೆ.ಜಿಗೆ ಬೆಳ್ಳಿ ದರ 2,53,000 ರೂ. ಗಳಷ್ಟಿದೆ.