Publish Date: Wed, 28 Jan 2026 (14:45 IST)
Updated Date: Wed, 28 Jan 2026 (14:47 IST)
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಭಾರೀ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,63,045.00 ರೂ.ಗಳಿತ್ತು. ಇಂದು 1,69,480.00 ರೂ.ಗಳಷ್ಟಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಭಾರೀ ಏರಿಕೆಯಾಗಿತ್ತು. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 322 ರೂ.ಗಳಷ್ಟು ಏರಿಕೆಯಾಗಿದ್ದು 16,517 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 295 ರೂ. ಏರಿಕೆಯಾಗಿದ್ದು 15,140 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 242 ರೂ.ಗಳಷ್ಟು ಏರಿಕೆಯಾಗಿದ್ದು 12,388 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 10000 ರೂ.ಗಳಷ್ಟು ಏರಿಕೆಯಾಗಿದೆ. ಪ್ರತೀ ಕೆ.ಜಿಗೆ ಬೆಳ್ಳಿ ದರ 3,80,000 ರೂ. ಗಳಷ್ಟಿದೆ.