Publish Date: Tue, 10 Mar 2026 (11:55 IST)
Updated Date: Tue, 10 Mar 2026 (11:57 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದರೆ ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ಈ ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ನಿನ್ನೆ 1,66,240.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,65,050.00 ರೂ.ಗಳಷ್ಟಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 70 ರೂ. ಏರಿಕೆಯಾಗಿದ್ದು 16,238 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 65 ರೂ. ಏರಿಕೆಯಾಗಿದ್ದು 14,885 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 53 ರೂ. ಏರಿಕೆಯಾಗಿದ್ದು 12,179 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 10,000 ರೂ.ಗಳಷ್ಟು ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,90,000 ರೂ. ಗಳಷ್ಟಿದೆ.