Publish Date: Fri, 13 Mar 2026 (12:20 IST)
Updated Date: Fri, 13 Mar 2026 (12:23 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ಈ ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ನಿನ್ನೆ 1,66,060.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,65,745.00 ರೂ.ಗಳಷ್ಟಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 98 ರೂ. ಇಳಿಕೆಯಾಗಿದ್ದು 16,124 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 90 ರೂ. ಇಳಿಕೆಯಾಗಿದ್ದು 14,780 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 74 ರೂ. ಇಳಿಕೆಯಾಗಿದ್ದು 12,093 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 100 ರೂ. ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,79,900 ರೂ. ಗಳಷ್ಟಿದೆ.