Publish Date: Sat, 04 Apr 2026 (11:51 IST)
Updated Date: Sat, 04 Apr 2026 (11:52 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಏರಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ನಿನ್ನೆ 1,51,650.00 ರೂ.ಗಳಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದ್ದು 1,51,650.00 ರೂ.ಗಳಷ್ಟಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಏರಿಳಿಕೆಯಾಗಿಲ್ಲ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 15,093 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 13,835 ರೂ.ಗಳಾಗಿವೆ. 12 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 11,320 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು ಯಥಾಸ್ಥಿತಿಯಲ್ಲಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,50,000 ರೂ. ಗಳಷ್ಟಿದೆ.