Select Your Language

Notifications

webdunia
webdunia
webdunia
webdunia

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

Gold Price
ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ಕೆಲವು ದಿನಗಳಿಂದ ಚಿನ್ನದ ದರ ಇಳಿಕೆಯಾಗುತ್ತಲೇ ಇತ್ತು. ಆದರೆ ಇಂದು ಮತ್ತೆ ಚಿನ್ನದ ದರದಲ್ಲಿ ವ್ಯತ್ಯಾಸ ಕಂಡುಬಂದಿದೆ. ಪರಿಶುದ್ಧ ಚಿನ್ನದ ದರಲ್ಲಿ ಮೊನ್ನೆ ಕೊಂಚ ಇಳಿಕೆಯಾಗಿತ್ತು. ಇಂದು ಚಿನ್ನದ ದರ ಮತ್ತೆ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳು ಭಾರತದಲ್ಲೂ ಚಿನ್ನದ ಬೆಲೆ ಮೇಲೆ ಪರಿಣಾಮ ಬೀರುತ್ತಲೇ ಇರುತ್ತವೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದು 1,46,720 ರೂ.ಗಳಾಗಿವೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 66 ರೂ ಇಳಿಕೆಯಾಗಿದ್ದು 14,351 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 60 ರೂ ಇಳಿಕೆಯಾಗಿದ್ದು 13,155 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 50 ರೂ ಇಳಿಕೆಯಾಗಿದ್ದು 10,763 ರೂ.ಗಳಷ್ಟಿದೆ.

ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು ಯಥಾಸ್ಥಿತಿಯಲ್ಲಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,35,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡಿಗೆ ಕಾವೇರಿ ನೀರು: ಶುಕ್ರವಾರ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ