Daily Horoscope

Select Your Language

Notifications

webdunia
webdunia
webdunia
webdunia

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

Gold Price
ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ಕೆಲವು ದಿನಗಳಿಂದ ಚಿನ್ನದ ದರ ಇಳಿಕೆಯಾಗುತ್ತಲೇ ಇತ್ತು. ಆದರೆ ಇಂದು ಮತ್ತೆ ಚಿನ್ನದ ದರದಲ್ಲಿ ವ್ಯತ್ಯಾಸ ಕಂಡುಬಂದಿದೆ. ಪರಿಶುದ್ಧ ಚಿನ್ನದ ದರಲ್ಲಿ ಮೊನ್ನೆ ಕೊಂಚ ಇಳಿಕೆಯಾಗಿತ್ತು. ಇಂದು ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳು ಭಾರತದಲ್ಲೂ ಚಿನ್ನದ ಬೆಲೆ ಮೇಲೆ ಪರಿಣಾಮ ಬೀರುತ್ತಲೇ ಇರುತ್ತವೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದ್ದು 1,64,520 ರೂ.ಗಳಾಗಿವೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಏರಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 121 ಏರಿಕೆಯಾಗಿದ್ದು 16,048 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 110 ರೂ ಗಳಷ್ಟು ಏರಿಕೆಯಾಗಿದ್ದು 14,710 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 90 ರೂ ಏರಿಕೆಯಾಗಿದ್ದು 12,036 ರೂ.ಗಳಷ್ಟಿದೆ.

ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 5,000 ರೂ ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,60,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ರಿಸಿದ ಡ್ರೈವರ್, ಸ್ಥಳೀಯರು ಮಾಡಿದ್ದೇನು: ಸಖತ್ ಇಂಟ್ರೆಸ್ಟಿಂಗ್ Video