Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

Krishnaveni K
ಶುಕ್ರವಾರ, 18 ಏಪ್ರಿಲ್ 2025 (11:03 IST)
ಬೆಂಗಳೂರು: ಚಿನ್ನ ಖರೀದಿ ಮಾಡಬೇಕೆಂದುಕೊಂಡಿದ್ದರೆ ಸದ್ಯಕ್ಕೆ ಸದ್ಯಕ್ಕಂತೂ ಚಿನ್ನ ಖರೀದಿಸುವಂತೆಯೇ ಇಲ್ಲ. ನಿನ್ನೆಯೇ ವಿಪರೀತ ಏರಿಕೆಯಾಗಿದ್ದ ಚಿನ್ನದ ದರ ಇಂದು ಮತ್ತೂ ಏರಿಕೆಯತ್ತ ಸಾಗಿದೆ. ಇಂದು ಪರಿಶುದ್ಧ ಚಿನ್ನದ ದರ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಇಂದಂತೂ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿತ್ತು. ಹಬ್ಬದ ಸಂದರ್ಭದಲ್ಲಿ ಚಿನ್ನದ ಬೆಲೆ ಗಗನಕ್ಕೇರಿತ್ತು. ಆದರೆ ಅದಾದ ಬಳಿಕ ಕೊಂಚ ಇಳಿಕೆಯಾಗಿತ್ತು. ಇಂದಂತೂ ಹಿಂದೆಂದೂ ಕಾಣದಷ್ಟು ದುಬಾರಿಯಾಗಿದೆ. ನಿನ್ನೆ ಪರಿಶುದ್ಧ ಚಿನ್ನದ ಬೆಲೆ  97, 820 ರೂ.ಗಳಷ್ಟಾಗಿತ್ತು. ಇಂದು ಇನ್ನೂ ಹೆಚ್ಚಾಗಿದ್ದು 97, 995 ರೂ. ಗಳಷ್ಟಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಏರಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 25 ರೂ. ಏರಿಕೆಯಾಗಿ 8,945 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 27 ರೂ. ಏರಿಕೆಯಾಗಿದ್ದು ಇಂದು 9,758 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಗ್ರಾಂಗೆ 21 ರೂ. ಗಳ್ಟು ಏರಿಕೆಯಾಗಿದ್ದು 7,319 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರವೂ ನಿರಂತರವಾಗಿ ಏರಿಕೆಯಾಗುತ್ತಲೇ ಇತ್ತು. ನಿನ್ನೆ ಬೆಳ್ಳಿ ಬೆಲೆ ಲಕ್ಷದ ಗಡಿ ತಲುಪಿದೆ. ಆದರೆ ಇಂದು 100 ರೂ.ಗಳಷ್ಟು ಇಳಿಕೆಯಾಗಿದ್ದು ಪ್ರತೀ ಕೆ.ಜಿ. ಬೆಳ್ಳಿ ಬೆಲೆ ಇಂದು 99,900 ರೂ.ಗೆ ಬಂದು ನಿಂತಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments