ಬೆಂಗಳೂರು: ಹಬ್ಬಗಳೆಲ್ಲಾ ಮುಗಿದ ಬೆನ್ನಲ್ಲೇ ಚಿನ್ನದ ದರ ನಿಧಾನವಾಗಿ ಇಳಿಕೆಯತ್ತ ಸಾಗಿತ್ತು. ಆದರೆ ಇಂದು ಚಿನ್ನದ ದರ ಕೊಂಚ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಅಕ್ಷಯ ತೃತೀಯ ಬಳಿಕ ಚಿನ್ನದ ಬೆಲೆಯಲ್ಲಿ ಕೊಂಚವೇ ಇಳಿಕೆಯಾಗಿತ್ತು. ಆದರೆ ವಾರದ ಆರಂಭದಲ್ಲೇ ಕೊಂಚ ಏರಿಕೆಯಾಗಿದ್ದು ಮತ್ತೆ ಗ್ರಾಹಕರ ಚಿಂತೆಗೆ ಕಾರಣವಾಗಿದೆ. ಚಿನ್ನದ ಬೆಲೆ ಇಳಿಕೆಯಾಗಬಹುದು ಎಂದು ನಿರೀಕ್ಷಿಸಿದ್ದ ಗ್ರಾಹಕರಿಗೆ ಇಂದಿನ ಬೆಲೆ ಶಾಕ್ ಆಗುವಂತಿದೆ. ಪರಿಶುದ್ಧ ಚಿನ್ನದ ಬೆಲೆ ಇಂದು 96,555 ರೂ.ಗಳಷ್ಟಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಕೊಂಚವೇ ಏರಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂಗೆ 20 ರೂ. ಏರಿಕೆಯಾಗಿದ್ದು 8,775 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ ಗ್ರಾಂಗೆ 22 ರೂ. ಏರಿಕೆಯಾಗಿದ್ದು 9,573 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಗ್ರಾಂಗೆ 16 ಏರಿಕೆಯಾಗಿದ್ದು 7,180 ರೂ. ರಷ್ಟಾಗಿದೆ.
ಬೆಳ್ಳಿ ದರ
ಬೆಳ್ಳಿ ದರವೂ ದರ ಮೊನ್ನೆಯಿಂದ ಇಳಿಕೆಯತ್ತ ಸಾಗಿದೆ. ಇಂದೂ ಕೂಡಾ ಬೆಳ್ಳಿ ದರ ಮತ್ತೆ ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿ. ಬೆಳ್ಳಿ ಬೆಲೆ 1000 ರೂ. ನಷ್ಟು ಇಳಿಕೆಯಾಗಿದ್ದು ಇಂದು 97,000 ರೂ.ಗಳಾಗಿತ್ತು.