ಬೆಂಗಳೂರು: ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿ ಗ್ರಾಹಕರು ಸಮಾಧಾನದ ನಿಟ್ಟುಸಿರು ಬಿಡುವಂತಾಗಿತ್ತು. ಆದರೆ ಮತ್ತೆ ಎರಡು ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಎಷ್ಟು ಏರಿಕೆಯಾಗಿದೆ ಎಂಬ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಮೊನ್ನೆಯಂತೂ ಪರಿಶುದ್ಧ ಚಿನ್ನದ ಬೆಲೆ 94 ಸಾವಿರ ಗಡಿ ದಾಟಿ ದಾಖಲೆ ಮಾಡಿತ್ತು. ಆದರೆ ಕಳೆದ ಎರಡುದಿನಗಳಿಂದ ಕೊಂಚ ಮಟ್ಟಿಗೆ ಇಳಿಕೆಯಾಗಿತ್ತು. ಹೀಗಾಗಿ ಚಿನ್ನದ ದರ ಮತ್ತಷ್ಟು ಇಳಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸುಳ್ಳಾಗಿದೆ. ನಿನ್ನೆ ಪರಿಶುದ್ಧ ಚಿನ್ನದ ಬೆಲೆ 91,205 ರೂ.ಗಳಿತ್ತು. ಇಂದು ಇದು 92,795 ರೂ.ಗಳಾಗಿವೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಭಾರೀ ಏರಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 270 ರೂ. ಏರಿಕೆಯಾಗಿದ್ದು 8,560 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 294 ರೂ. ಏರಿಕೆಯಾಗಿದ್ದು ಇಂದು 9,338 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 221 ರೂ. ಏರಿಕೆಯಾಗಿದ್ದು ಇಂದು ಗ್ರಾಂಗೆ 7,004 ರೂ. ರಷ್ಟಾಗಿದೆ.
ಬೆಳ್ಳಿ ದರ
ಆದರೆ ಬೆಳ್ಳಿ ದರದಲ್ಲಿ ನಿನ್ನೆ ಇಳಿಕೆಯಾಗಿತ್ತು. ಇಂದು ಮತ್ತೆ ದರ ಏರಿಕೆಯಾಗಿದೆ. ಇಂದು ಬೆಳ್ಳಿ ದರ 2,000 ರೂಗಳಷ್ಟು ಏರಿಕೆಯಾಗಿದ್ದು ಪ್ರತೀ ಕೆ.ಜಿ.ಗೆ 95,000 ರೂ.ಗೆ ಬಂದು ನಿಂತಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.