Select Your Language

Notifications

webdunia
webdunia
webdunia
webdunia

Gold Price today: ಇಂದು ಚಿನ್ನದ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ

Gold
ಬೆಂಗಳೂರು: ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿ ಗ್ರಾಹಕರು ಸಮಾಧಾನದ ನಿಟ್ಟುಸಿರು ಬಿಡುವಂತಾಗಿತ್ತು. ಆದರೆ ಮತ್ತೆ ಮೂರು ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಎಷ್ಟು ಏರಿಕೆಯಾಗಿದೆ ಎಂಬ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಮೊನ್ನೆಯಂತೂ ಪರಿಶುದ್ಧ ಚಿನ್ನದ ಬೆಲೆ 94 ಸಾವಿರ ಗಡಿ ದಾಟಿ ದಾಖಲೆ ಮಾಡಿತ್ತು. ಆದರೆ ಕಳೆದ ಎರಡುದಿನಗಳಿಂದ ಕೊಂಚ ಮಟ್ಟಿಗೆ ಇಳಿಕೆಯಾಗಿತ್ತು. ಹೀಗಾಗಿ ಚಿನ್ನದ ದರ ಮತ್ತಷ್ಟು ಇಳಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸುಳ್ಳಾಗಿದೆ. ನಿನ್ನೆ ಪರಿಶುದ್ಧ ಚಿನ್ನದ ಬೆಲೆ 92,795 ರೂ.ಗಳಾಗಿತ್ತು. ಪರಿಶುದ್ಧ ಚಿನ್ನದ ಬೆಲೆ ಯಥಾ ಸ್ಥಿತಿಯಲ್ಲಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಭಾರೀ ಏರಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 185 ರೂ. ಏರಿಕೆಯಾಗಿದ್ದು 8,745 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 202 ರೂ. ಏರಿಕೆಯಾಗಿದ್ದು ಇಂದು 9,540 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 151 ರೂ. ಏರಿಕೆಯಾಗಿದ್ದು ಇಂದು ಗ್ರಾಂಗೆ 7,115 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರವೂ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ ದರ ಏರಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ 100  ರೂಗಳಷ್ಟು ಏರಿಕೆಯಾಗಿದ್ದು ಪ್ರತೀ ಕೆ.ಜಿ.ಗೆ 97,100 ರೂ.ಗೆ ಬಂದು ನಿಂತಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಏ.17 ರಂದು ಪ್ರತಿಭಟನೆ