Daily Horoscope
✕

Gold Price Today: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ, ಇಂದಿನ ದರ ಎಷ್ಟಾಗಿದೆ ನೋಡಿ

Krishnaveni K
ಸೋಮವಾರ, 31 ಮಾರ್ಚ್ 2025 (10:41 IST)
ಬೆಂಗಳೂರು: ಚಿನ್ನದ ಬೆಲೆ ದಿನೇ ದಿನೇ ಗಗನಕ್ಕೇರಿದ್ದು, ಇದೀಗ ವಜ್ರದ ಬೆಲೆಯಾಗಿದೆ. ಚಿನ್ನ ಕೊಳ್ಳುವುದು ಮಧ್ಯಮ ವರ್ಗದವರಿಗೆ ಗಗನಕುಸುಮವಾಗುತ್ತಿದೆ. ಯುಗಾದಿ ಹಬ್ಬ ಕಳೆದರೂ ಚಿನ್ನದ ಬೆಲೆ ಕಡಿಮೆಯಾಗುತ್ತಿಲ್ಲ. ಇಂದು ಚಿನ್ನ ಮತ್ತು ಬೆಳ್ಳಿ ದರ ಎಷ್ಟಾಗಿದೆ ನೋಡಿ.

ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಯುಗಾದಿ ಹಬ್ಬಕ್ಕೆ ಮುನ್ನ ಈಗ ಬೆಲೆ ದಾಖಲೆಯ ಮಟ್ಟಕ್ಕೆ ತಲುಪಿತ್ತು. ಆದರೆ ಹಬ್ಬ ಮುಗಿದರೂ ಚಿನ್ನದ ದರ ಕಡಿಮೆಯಾಗಿಲ್ಲಇಂದೂ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಇಂದಂತೂ 92,420 ರೂ.ಗಳಷ್ಟಾಗಿದೆ. ಸದ್ಯಕ್ಕೆ ಮಧ್ಯಮ ವರ್ಗದವರಿಗೆ ಚಿನ್ನ ಗಗನ ಕುಸುಮವೇ ಸರಿ.

22,24 ಮತ್ತು 18 ಕ್ಯಾರೆಟ್ ಗುಣಮಟ್ಟದ ಚಿನ್ನದ ಬೆಲೆಯಲ್ಲೂ ಸತತ ಏರಿಕೆಯಾಗುತ್ತಲೇ ಇತ್ತು. ಆದರೆ ಇಂದು ಕೇವಲ 1 ರೂ.ನಷ್ಟ ಇಳಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 1  ರೂ. ಇಳಿಕೆಯಾಗಿದ್ದು 8,359 ರೂ. ರಷ್ಟಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 1ರೂ. ಇಳಿಕೆಯಾಗಿದ್ದು 9,119 ರೂ. ಗಳಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 1 ರೂ. ಇಳಿಕೆಯಾಗಿದ್ದು ಇಂದು ಗ್ರಾಂಗೆ 6,839 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರದಲ್ಲಿ ಇಂದು ಕೊಂಚ ಮಟ್ಟಿಗೆ ಇಳಿಕೆಯಾಗಿದೆ.  ಇಂದು ಪ್ರತೀ ಕೆ.ಜಿ.ಗೆ 100 ರೂಗಳಷ್ಟು ಇಳಿಕೆಯಾಗಿದ್ದು ಇಂದು 1,03,900 ರೂ.ಗಳಿಗೆ ಬಂದು ತಲುಪಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments