ಬೆಂಗಳೂರು: ಚಿನ್ನದ ಬೆಲೆ ಇತ್ತೀಚೆಗಿನ ದಿನಗಳಲ್ಲಿ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಲೇ ಇದೆ. ಇಂದೂ ಕೂಡಾ ಪರಿಶುದ್ಧ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ದರ ಎಷ್ಟಾಗಿದೆ ನೋಡಿ.
ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಯುಗಾಗಿ ಹಬ್ಬದ ಬಳಿಕವಾದರೂ ಚಿನ್ನದ ಬೆಲೆ ಕೊಂಚ ಇಳಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸುಳ್ಳಾಗಿದೆ. ಈಗ ದಿನೇ ದಿನೇ ಏರಿಕೆಯಾಗುತ್ತಿರುವುದು ನೋಡಿದರೆ ಒಂದೇ ವಾರದಲ್ಲಿ ಲಕ್ಷದ ಗಡಿ ತಲುಪುವುದು ಖಚಿತ ಎನ್ನಬಹುದು. ನಿನ್ನೆ92,420 ರೂ.ಗಳಷ್ಟಾಗಿತ್ತು. ಇಂದು ಪರಿಶುದ್ಧ ಚಿನ್ನದ ಬೆಲೆ 92,550 ರೂ.ಗೆ ಏರಿಕೆಯಾಗಿದೆ.
22,24 ಮತ್ತು 18 ಕ್ಯಾರೆಟ್ ಗುಣಮಟ್ಟದ ಚಿನ್ನದ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 85 ರೂ. ಇಳಿಕೆಯಾಗಿದ್ದು 8,510 ರೂ. ರಷ್ಟಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 93 ರೂ. ಇಳಿಕೆಯಾಗಿದ್ದು 9,284 ರೂ. ಗಳಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 69 ರೂ. ಇಳಿಕೆಯಾಗಿದ್ದು ಇಂದು ಗ್ರಾಂಗೆ 6,839 ರೂ. ರಷ್ಟಾಗಿದೆ.
ಬೆಳ್ಳಿ ದರ
ಬೆಳ್ಳಿ ದರದಲ್ಲಿ ಇಂದು ಕೊಂಚ ಮಟ್ಟಿಗೆ ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿ.ಗೆ 1100 ರೂಗಳಷ್ಟು ಇಳಿಕೆಯಾಗಿದ್ದು ಇಂದು 1,05,000 ರೂ.ಗಳಿಗೆ ಬಂದು ತಲುಪಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.