Webdunia - Bharat's app for daily news and videos

Install App

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಗುಡ್ ನ್ಯೂಸ್, ಇಂದಿನ ದರ ಹೀಗಿದೆ

Krishnaveni K
ಗುರುವಾರ, 3 ಏಪ್ರಿಲ್ 2025 (11:33 IST)
ಬೆಂಗಳೂರು: ಯುಗಾದಿ, ರಂಜಾನ್ ಬಿಡುವಿನ ಬಳಿಕ ಅಡಿಕೆ ಬೆಳಗಾರರಿಗೆ ಈಗ ಬೆಲೆ ಏರಿಕೆಯ ಖುಷಿಯ ಸುದ್ದಿ ಸಿಕ್ಕಿದೆ. ಕಳೆದ ವಾರಕ್ಕೆ ಹೋಲಿಸಿದರೆ ಹೊಸ ಅಡಿಕೆ ಮತ್ತು ಹಳೆ ಅಡಿಕೆ ಬೆಲೆ ಹೆಚ್ಚಳವಾಗಿದೆ. ಇಂದಿನ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಹೊಸ ಅಡಿಕೆ ಮತ್ತು ಹಳೆ ಅಡಿಕೆ ಬೆಲೆ ನಿಂತ ನೀರಾಗಿತ್ತು. ಆದರೆ ಯುಗಾದಿ ಹಬ್ಬದ ಬಳಿಕ ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಇದು ಬೆಳಗಾರರ ಮೊಗದಲ್ಲಿ ನೆಮ್ಮದಿ ಮೂಡಿಸಿದೆ. ಇಂದು ಹೊಸ ಅಡಿಕೆ ಬೆಲೆ ಗರಿಷ್ಠ 430 ರೂ. ಗಳಷ್ಟಿದ್ದರೆ, ಹಳೆ ಅಡಿಕೆ ಬೆಲೆ ಗರಿಷ್ಠ 475 ರೂ.ಗಳಷ್ಟಿದೆ. ಡಬಲ್ ಚೋಲ್ ಅಡಿಕೆ ಬೆಲೆ ಗರಿಷ್ಠ 495 ರೂ.ಗಳಷ್ಟಿದೆ.

ಹೊಸ ಫಟೋರ ದರ 315 ರೂ.ಗಳಷ್ಟಾಗಿದೆ. ಹಳೆ ಫಟೋರ ಕಳೆದ ವಾರದಂತೇ 335 ರೂ. ಗೆ ಗಳಲ್ಲೇ ಇದೆ. ಹೊಸ ಉಳ್ಳಿ ದರ ಗರಿಷ್ಠ 170 ರೂ., ಹಳೆ ಉಳ್ಳಿ 180 ರೂ. ಗಳಷ್ಟೇ ಇದೆ. ಆದರೆ ಹೊಸ ಕೋಕ 10 ರೂ. ಏರಿಕೆಯಾಗಿದ್ದು 260 ರೂ., ಹಳೇ ಕೋಕ 260 ರೂ. ಗಳಷ್ಟೇ ಇದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಈಗ ಬಂಪರ್. ಕಳೆದ ವಾರದವರೆಗೂ ದರ ಗರಿಷ್ಠ 680 ರೂ.ಗಳಷ್ಟಿತ್ತು. ಬಹಳ ದಿನಗಳ ನಂತರ ಈಗ ದರ ಏರಿಕೆಯಾಗಿದ್ದು ಕಾಳುಮೆಣಸು ಗರಿಷ್ಠ ದರ 700 ರೂ.ಗೆ ಬಂದು ತಲುಪಿದೆ. ಇನ್ನು ಒಣಕೊಬ್ಬರಿ ದರ ಗರಿಷ್ಠ 175 ರೂ.ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments