ಗ್ರಾಹಕರಿಗೆ ಸಿಹಿಸುದ್ದಿ; ಮತ್ತೆ ಇಳಿದ ಎಲ್‍.ಪಿಜಿ ಸಿಲಿಂಡರ್ ದರ

ಶುಕ್ರವಾರ, 1 ಫೆಬ್ರವರಿ 2019 (06:12 IST)
ನವದೆಹಲಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಕುಸಿತದ ಹಿನ್ನೆಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ (ಎಲ್‍.ಪಿಜಿ) ದರದಲ್ಲಿ ಮತ್ತೆ ಇಳಿಕೆಯಾಗಿದೆ.


ಸಬ್ಸಿಡಿ ಸಹಿತ ಸಿಲಿಂಡರ್‌ಗೆ 1.46 ರೂ. ಹಾಗೂ ಸಬ್ಸಿಡಿ ರಹಿತ ಸಿಲಿಂಡರ್ ದರದಲ್ಲಿ 30 ರೂ. ಕಡಿತವಾಗಿದೆ. ಇದರಿಂದಾಗಿ ದೆಹಲಿಯಲ್ಲಿ ಪ್ರತಿ 14.2 ಕೆಜಿ ಸಬ್ಸಿಡಿ ಗ್ಯಾಸ್ ಸಿಲಿಂಡರ್ ದರ 493.53 ರೂ. ಆಗಲಿದೆ.


ಹಾಗೇ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ 30 ರೂ. ಇಳಿಕೆಯಾಗಿದ್ದು, 14.2 ಕೆಜಿ ಸಿಲಿಂಡರ್ ಈಗ 659 ರೂ.ಗೆ ಸಿಗಲಿದೆ. ಗುರುವಾರ ರಾತ್ರಿಯಿಂದ ಈ ಹೊಸ ದರ ಅನ್ವಯವಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸಿಮ್ ಬೇಕು ಎಂದಿದ್ದಕ್ಕೆ ಮಗಳನ್ನೇ ಕೊಂದ ತಂದೆ