ನವದೆಹಲಿ: ನಮ್ಮ ದೇಶದಲ್ಲಿ ಇನ್ನು ಮುಂದೆ ಪಾಕಿಸ್ತಾನ ಧ್ವಜ, ಸರಕುಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಇ ಕಾಮರ್ಸ್ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಆದೇಶ ನೀಡಿದೆ.
ಅಮೆಝೋನ್, ಫ್ಲಿಪ್ ಕಾರ್ಟ್ ಸೇರಿದಂತೆ ಎಲ್ಲಾ ಇ ಕಾಮರ್ಸ್ ಮಾರುಕಟ್ಟೆಗಳ ಕಂಪನಿಗಳಿಗೆ ಈ ಸೂಚನೆ ನೀಡಲಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದ ಬೆನ್ನಲ್ಲೇ ಗ್ರಾಹಕ ಪ್ರಾಧಿಕಾರ ಈ ಮಹತ್ವದ ಆದೇಶ ನೀಡಿದೆ. ಆ ಮೂಲಕ ಪಾಕಿಸ್ತಾನಕ್ಕೆ ಮತ್ತೊಂದು ಪೆಟ್ಟು ಕೊಡಲು ಮುಂದಾಗಿದೆ.
ಈಗಾಗಲೇ ಪಾಕಿಸ್ತಾನದ ಸರಕುಗಳು ಪಟ್ಟಿಯಲ್ಲಿದ್ದರೂ ತಕ್ಷಣವೇ ತೆಗೆದುಹಾಕಬೇಕು. ಪಾಕಿಸ್ತಾನದ ಧ್ವಜ ಸೇರಿದಂತೆ ಸರಕುಗಳನ್ನು ಮಾರಾಟ ಮಾಡಬಾರದು ಎಂದು ಕೇಂದ್ರ ಗ್ರಾಹಕ ವ್ಯವಹಾರ ಮತ್ತು ಆಹಾರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಇ ಕಾಮರ್ಸ್ ಮಾರುಕಟ್ಟೆಗಳಲ್ಲಿ ಪಾಕಿಸ್ತಾನದ ಧ್ವಜ, ಲೋಗೋ ಹೊಂದಿರುವ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿತ್ತು. ಇದು ಸ್ವೀಕಾರಾರ್ಹವಲ್ಲ. ಇದನ್ನು ಪಾಲಿಸದೇ ಇದ್ದರೆ ಅಂತಹ ಕಂಪನಿಗಳಿಗೆ ದಂಡ ಅಥವಾ ನಿಷೇಧದ ಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಆಗ್ರಹಿಸಿದ್ದರು. ಅದರಂತೆ ಈಗ ಕ್ರಮ ಕೈಗೊಳ್ಳಲಾಗಿದೆ.