ಸಾಗರೋತ್ತರ ಮಾರುಕಟ್ಟೆಯಲ್ಲಿ ನಿರಂತರವಾಗಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಪರಿಣಾಮ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 7 ಪೈಸೆ ಕುಸಿತ ಕಂಡು 66.62 ರೂಪಾಯಿ ಮೌಲ್ಯಕ್ಕೆ ತಲುಪಿದೆ.
ಸಾಗರೋತ್ತರ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಪರಿಣಾಮ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ರೂಪಾಯಿ ಮೌಲ್ಯದಲ್ಲಿ ಕುಸಿತ ಕಂಡಿದೆ ಎಂದು ಮಾರುಕಟ್ಟೆ ವರ್ತಕರು ತಿಳಿಸಿದ್ದಾರೆ.
ಗುರುವಾರದ ವಹಿವಾಟಿನ ಮುಕ್ತಾಯಕ್ಕೆ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್ ಮಾರಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಸ್ಥಿರವಾಗಿ 66.55 ಮೌಲ್ಯಕ್ಕೆ ತಲುಪಿತ್ತು.
ಏತನ್ಮಧ್ಯೆ ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸಂವೇದಿ ಸೂಚ್ಯಂಕ 160.09 ಪಾಯಿಂಟ್‌ಗಳಷ್ಟು ಕುಸಿತ ಕಂಡು 25,102.12 ಅಂಕಗಳಿಗೆ ತಲುಪಿದೆ.
ತಾಜಾ ಸುದ್ದಿಗಳನ್ನು ಓದಲು
ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ