Webdunia - Bharat's app for daily news and videos

Install App

ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಸೆಜ್ ಸ್ಥಾಪನೆ

Webdunia
ಗುರುವಾರ, 19 ಜನವರಿ 2017 (12:42 IST)
ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಮುಂಚೂಣಿಯನ್ನು ಕಾಯ್ದುಕೊಳ್ಳಲು ಹಾಗೂ ಹೂಡಿಕೆಗೆ ಅತಿ ಹೆಚ್ಚಿನ ಅವಕಾಶ ಕಲ್ಪಿಸಲು ದೇವನಹಳ್ಳಿಯಲ್ಲಿ ಬೆಂಗಳೂರು ಮಾಹಿತಿ ತಂತ್ರಜ್ಞಾನ ಮತ್ತು ಹಾರ್ಡ್‍ವೇರ್ ಪಾರ್ಕ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಫ್ತು ಉತ್ತೇಜನ ಕೈಗಾರಿಕಾ ಪಾರ್ಕ್, ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ವಿಶೇಷ ವಿತ್ತ ವಲಯ, ಹುಬ್ಬಳ್ಳಿಯಲ್ಲಿ ಆರ್ಯಭಟ ಪಾರ್ಕ್ ಸ್ಥಾಪಿಸಲು ಹಾಗೂ ಖಾಸಗಿ ಸಾರ್ವಜನಿಕ ಸಹಭಾಗಿತ್ವ ಮಾದರಿಯಲ್ಲಿ ಇನ್ ಕ್ಯುಬೇಟರ್ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
 
ಮೆಟ್ರೋ ಸೇವೆ ವಿಸ್ತರಣೆ:  ನೆಟ್‍ಆಪ್ ಸಂಸ್ಥೆಯು ನಿರ್ಮಿಸಿರುವ ಪರಿಸರ ಸ್ನೇಹಿ ಕ್ಯಾಂಪಸ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಅವರು ನಮ್ಮ ಸರ್ಕಾರವು ತಂತ್ರಜ್ಞಾನ ಕಂಪನಿಗಳ ಸ್ಥಾಪನೆಗೆ ಪೂರಕವಾದ ವಾತಾವರಣ ಸೃಷ್ಟಿಸುವುದಷ್ಟೇ ಅಲ್ಲ ಅವುಗಳು ಹೆಚ್ಚಿನ ಅಭಿವೃದ್ಧಿ ಸಾಧಿಸಲು ಪೂರಕವಾಗಿ ಕಾರ್ಯನಿರ್ವಹಿಸಲು ಬದ್ಧವಾಗಿದೆ ಎಂದು ಹೇಳಿದರು.
 
ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬೆಂಬಲ ನೀಡಲು ಸರ್ಕಾರ ಬದ್ಧವಾಗಿದ್ದು ನಮ್ಮ ಮೆಟ್ರೋ ಸೇವೆಯನ್ನು ಬೈಯಪ್ಪನಹಳ್ಳಿಯಿಂದ ವೈಟ್‍ಫೀಲ್ಡ್‍ವರೆಗೆ ವಿಸ್ತರಿಸುವ ನಮ್ಮ ಇತ್ತೀಚಿನ ಘೋಷಣೆಯು ಈ ಪ್ರದೇಶದ ಕೈಗಾರಿಕಾ ಸಂಸ್ಥೆಗಳ ಸಿಬ್ಬಂದಿಯ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಸಮಾರಂಭದಲ್ಲಿ ಸಚಿವರುಗಳಾದ ಕೆ ಜೆ ಜಾರ್ಜ್, ಆರ್ ವಿ ದೇಶಪಾಂಡೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಇಲ್ಲೇ ಇರಬೇಕಾದವರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಮುಂದಿನ ಸುದ್ದಿ