ವಿಮಾನಯಾನ: ಕಡಿಮೆ ದರದಿಂದಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ

Webdunia
ಮಂಗಳವಾರ, 21 ಜೂನ್ 2016 (15:37 IST)
ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದಲ್ಲಿ ಪ್ರಸಕ್ತ ವರ್ಷದ ಆರಂಭಿಕ ಐದು ತಿಂಗಳುಗಳಲ್ಲಿ ದೇಶಿಯ ವಿಮಾನ ಹಾರಾಟದ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.22.87 ರಷ್ಟು ವೃದ್ಧಿಯಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. 
ಕಳೆದ ಆರ್ಥಿಕ ವರ್ಷದಲ್ಲಿ 322,32 ಪ್ರಯಾಣಿಕರು ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದು, ಪ್ರಸಕ್ತ ಸಾಲಿನಲ್ಲಿ 396,04 ಕ್ಕೆ ಏರಿಕೆಯಾಗಿದೆ. ಪ್ರಸಕ್ತ ಸಾಲಿನ ಮೇ ತಿಂಗಳಲ್ಲಿ 86.69 ಪ್ರಯಾಣಿಕರು ದೇಶಿ ವಿಮಾನ ಪ್ರಯಾಣ ಬೆಳೆಸಿದ್ದಾರೆ. ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ 71.27 ಪ್ರಯಾಣಿಕರು ದೇಶಿ ವಿಮಾನ ಪ್ರಯಾಣ ಬೆಳೆಸಿದ್ದರಿಂದ ಶೇ.21.63 ರಷ್ಟು ಹೆಚ್ಚಳವಾದಂತಾಗಿದೆ.
 
ಕಳೆದ ಮೇ ತಿಂಗಳಲ್ಲಿ ಅತಿ ಹೆಚ್ಚಿನ ಪ್ರಯಾಣಿಕರು  ವಿಮಾನದಲ್ಲಿ ಹಾರಾಟ ನಡೆಸಿರುವುದು ಕಂಡು ಬಂದಿದೆ. ಕಡಿಮೆ ದರದ ವಿಮಾನ ಪ್ರಯಾಣ ದೊರೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಆಕರ್ಷಿತರಾಗುತ್ತಿದ್ದಾರೆ ಎಂದು ಕೈಗಾರಿಕಾ ವೀಕ್ಷಕರು ಅಭಿಪ್ರಾಪ ವ್ಯಕ್ತಪಡಿಸಿದ್ದಾರೆ.
 
ಸ್ಪೈಸ್ ಜೆಟ್ ಸಂಸ್ಥೆ ಏಪ್ರಿಲ್ ತಿಂಗಳಲ್ಲಿ ಶೇ.93.2 ರಷ್ಟು ಮುಂಗಡ ಬುಕ್ಕಿಂಗ್ ಹೊಂದಿದ್ದಕ್ಕೆ ಹೋಲಿಸಿದರೆ ಮೇ ತಿಂಗಳಲ್ಲಿ 93.5 ಪ್ರತಿಶತ ಆಸನಗಳನ್ನು ಹೆಚ್ಚಿಸಿದೆ. ಏರಿಂಡಿಯಾ ವಿಮಾನಯಾನ ಸಂಸ್ಥೆ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.78.9 ರಿಂದ ಶೇ.84.7 ರಷ್ಟು ಚೇತರಿಕೆಯಾಗಿದೆ.  
 
ಕಡಿಮೆ ದರದದಲ್ಲಿ ವಿಮಾನ ಸೇವೆ ನೀಡುತ್ತಿರುವ ಇಂಡಿಗೋ ಸಂಸ್ಥೆ ಮಾರುಕಟ್ಟೆಯಲ್ಲಿ 38.5 ಪ್ರತಿಶತ ಶೇರ್‌ಗಳನ್ನು ಹೊಂದಿದೆ. ಈ ಸಂಸ್ಥೆ ಮೇ ತಿಂಗಳಲ್ಲಿ 33.37 ಲಕ್ಷ ಪ್ರಯಾಣಿಕರಿಗೆ ವಿಮಾನ ಸೇವೆ ಒದಗಿಸಿದೆ. ಜೆಟ್ ಏರ್‌ವೇಸ್ 13.94 ಲಕ್ಷ ಪ್ರಯಾಣಿಕರು ಮತ್ತು ರಾಷ್ಟ್ರೀಯ ವಾಹಕ ಏರ್ ಇಂಡಿಯಾ 13.34 ಲಕ್ಷ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments