ರಿಲಯನ್ಸ್ ಸಮೂಹದ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಭಾರತದ ನಂ.1 ಶ್ರೀಮಂತರಾಗಿ ಹೊರಹೊಮ್ಮಿದ್ದಾರೆ. ಕೆಲ ಕಾಲ ನಂ.1 ಶ್ರೀಮಂತ ಭಾರತೀಯರ ಪಟ್ಟಿಯಲ್ಲಿದ್ದ ಅದಾನಿ ಸಮೂಹದ ಗೌತಮ್ ಅದಾನಿಯನ್ನು ಅಂಬಾನಿ ಹಿಂದಿಕ್ಕಿದ್ದಾರೆ. ಪ್ರತಿಷ್ಠಿತ ಫೋರ್ಬ್ಸ್ ನಿಯತಕಾಲಿಕೆ 2023ನೇ ಸಾಲಿನ ಟಾಪ್ 100 ಶ್ರೀಮಂತ ಭಾರತೀಯರ ಪಟ್ಟಿ ಬಿಡುಗಡೆ ಮಾಡಿದೆ.ಅದರಲ್ಲಿ ಮುಕೇಶ್ ಅಂಬಾನಿ ಪ್ರಥಮ ಸ್ಥಾನ, ಪಡೆದಿದ್ದಾರೆ.