Select Your Language

Notifications

webdunia
webdunia
webdunia
webdunia

ವರ್ಗಾವಣೆಯ ನಂತರ ಹೊಸ ಹುದ್ದೆ ನೀಡುವಂತೆ ಹೈಕೋರ್ಟ್ ಆದೇಶ

ವರ್ಗಾವಣೆಯ ನಂತರ ಹೊಸ ಹುದ್ದೆ  ನೀಡುವಂತೆ ಹೈಕೋರ್ಟ್ ಆದೇಶ
ಬೆಂಗಳೂರು , ಗುರುವಾರ, 1 ಸೆಪ್ಟಂಬರ್ 2022 (16:09 IST)
ವರ್ಗಾವಣೆ ಆದೇಶ ಹೊರಡಿಸಿದಾಗ ಅಧಿಕಾರಿಗಳಿಗೆ ಕಡ್ಡಾಯವಾಗಿ ಹೊಸ ಹುದ್ದೆ ತೋರಿಸಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೊಸ ಹುದ್ದೆ ತೋರಿಸದೆ ಹಾಲಿಯಿರುವ ಹುದ್ದೆಯಿಂದ ಅಧಿಕಾರಿಯನ್ನು ವರ್ಗಾವಣೆ ಮಾಡುವ ರಾಜ್ಯ ಸರ್ಕಾರದ ಧೋರಣೆಗೆ ಹೈಕೋರ್ಟ್ ಕಿಡಿಕಾರಿದೆ.ಪುರಸಭೆ ಮುಖ್ಯಾಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರವು ನಂತರ ಯಾವುದೇ ಹುದ್ದೆ ತೋರಿಸಿಲ್ಲ ಎಂದು ಆಕ್ಷೇಪಿಸಿ ಮೂರ್ತಿ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠವು ಪುರಸ್ಕರಿಸಿದೆ.
 
ಮುಖ್ಯಾಧಿಕಾರಿ ಹುದ್ದೆಯಿಂದ ಅರ್ಜಿದಾರರನ್ನು ವರ್ಗಾಯಿಸಿ 2021ರ ಡಿ. 23ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿರುವ ಪೀಠವು ವರ್ಗಾವಣೆ ಮುನ್ನ ಹೊಂದಿದ್ದ ಹುದ್ದೆಗೆ ಅರ್ಜಿದಾರರನ್ನು ಮರು ನಿಯೋಜಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ. ಹೊಸ ಹುದ್ದೆ ತೋರಿಸದೆ, ಹಾಲಿಯಿರುವ ಹುದ್ದೆಯಿಂದ ಅಧಿಕಾರಿಯನ್ನು ಎತ್ತಂಗಡಿ ಮಾಡಿದ ಹಲವು ಪ್ರಕರಣಗಳನ್ನು ನ್ಯಾಯಾಲಯ ಗಮನಿಸಿದೆ. ಸರ್ಕಾರದ ಈ ನಡೆಯಿಂದ ವರ್ಗಾವಣೆಗೊಂಡ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆ ಮುಂದೆ ಹೋಗಿ ತಮಗೆ ಹುದ್ದೆ ತೋರಿಸುವಂತೆ ಕೋರುವ ಪರಿಸ್ಥಿತಿ ಉದ್ಭವಿಸುತ್ತದೆ. ಇಂತಹ ಸಮಸ್ಯೆಗೆ ಸರ್ಕಾರ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಪೀಠವು ಸೂಚಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿ.ಬಿ.ಎಂ.ಪಿ ಪರಿಸರ ಸ್ನೇಹಿ ಗಣೇಶ ..!!!