Webdunia - Bharat's app for daily news and videos

Install App

ಕೇಂದ್ರ ಮಧ್ಯಂತರ ಬಜೆಟ್ ನಲ್ಲಿ ಈ ಅನುದಾನಗಳು ಗ್ಯಾರಂಟಿ

Krishnaveni K
ಗುರುವಾರ, 1 ಫೆಬ್ರವರಿ 2024 (09:20 IST)
Photo: Twitter


ನವದೆಹಲಿ: ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ನ್ನು ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.


ಇಂದು ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಆರಂಭವಾಗಲಿದೆ. ಇದು ಈ ಸರ್ಕಾರದ ಕೊನೆಯ ಬಜೆಟ್ ಆಗಿದ್ದು, ಮಧ‍್ಯಂತರ ಬಜೆಟ್ ಆಗಿರಲಿದೆ. ಇನ್ನು ಕೆಲವೇ ಸಮಯದಲ್ಲಿ ಲೋಕಸಭೆ ಚುನಾವಣೆ ಇರುವುದರಿಂದ ಮೂರು ತಿಂಗಳ ಅವಧಿಗೆ ಘೋಷಿಸಲಾಗುವ ತಾತ್ಕಾಲಿಕ ಬಜೆಟ್ ಇದಾಗಲಿದೆ.

ಇದು 6 ನೇ ಬಾರಿಗೆ ವಿತ್ತ ಸಚಿವೆ ನಿರ್ಮಲಾ ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿಯವರ ದಾಖಲೆ ಸರಿಗಟ್ಟಲಿದ್ದಾರೆ. ಈ ಬಾರಿ ಬಜೆಟ್ ಹಂಚಿಕೆಯನ್ನು ಶೇ. 2.9 ರಿಂದ ಶೇ. 6 ಕ್ಕೆ ಏರಿಕೆ ಮಾಡುವ ನಿರೀಕ್ಷೆಯಿದೆ.

ಬಜೆಟ್ ನಲ್ಲಿ ನಿರೀಕ್ಷಿತ ಅನುದಾನಗಳು
ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಜನಪರ ಬಜೆಟ್ ಘೋಷಿಸುವುದು ಗ್ಯಾರಂಟಿಯಾಗಿದೆ. ಹೀಗಾಗಿ ಎಲ್ ಪಿಜೆ, ಪೆಟ್ರೋಲ್, ಡೀಸೆಲ್ ದರ ಇಳಿಕೆಗೆ ಕ್ರಮ ಕೈಗೊಳ್ಳಬಹುದು. ಜೊತೆಗೆ ಬೇಳೆ-ಕಾಳುಗಳು, ಅಕ್ಕಿ ಇತ್ಯಾದಿ ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ. ಇದರ ಜೊತೆಗೆ ಪಿಎಂ ಕಿಸಾನ್ ಯೋಜನೆ ಮುಂದುವರಿಕೆ ಅಥವಾ ಹೆಚ್ಚಳವಾಗಬಹುದು. ಮೂಲಸೌಕರ್ಯಾಭಿವೃದ್ಧಿ ಯೋಜನೆಗಳ ಅಭಿವೃದ್ಧಿ ಹೆಚ್ಚಿನ ಅನುದಾನ ಮೀಸಲಿಡುವ ಸಾಧ‍್ಯತೆಯಿದೆ. ಜೊತೆಗೆ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗೆ ಹಣ ಹಂಚಿಕೆಯಾಗಲಿದೆ. ಯುವ ಜನತೆಯನ್ನು ಸೆಳೆಯುವ ಸಲುವಾಗಿ ಡಿಜಿಟಲ್ ಆರ್ಥಿಕತೆ, ಉದ್ಯೋಗ ಹೆಚ್ಚಳ ಮಾಡುವಂತಹ ಯೋಜನೆಗಳಿಗೆ ಪ್ರೋತ್ಸಾಹ ಧನ ನೀಡುವ ಸಾಧ‍್ಯತೆಯಿದೆ.

ರಾಜ್ಯದ ನಿರೀಕ್ಷೆಗಳು
ಈ ಬಜೆಟ್ ನಲ್ಲಿ ಕರ್ನಾಟಕಕ್ಕೆ ಕೆಲವೊಂದು ಕೊಡುಗೆ ನಿರೀಕ್ಷಿಸಲಾಗಿದೆ. ರಾಜ್ಯದಲ್ಲಿ ಬರಗಾಲವಿರುವುದರಿಂದ ಪ್ರಮುಖ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅನುದಾನ ಸಿಗಬಹುದು. ಬೆಂಗಳೂರು ಉಪನಗರ, ವರ್ತುಲ ರೈಲು ಯೋಜನೆಗಳಿಗೆ ಹಣ ಸಿಗುವ ನಿರೀಕ್ಷೆ. ಇದರ ಜೊತೆಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯೋಜನೆ ಮತ್ತಷ್ಟು ವಿಸ್ತರಣೆಯಾಗುವ ಸಾಧ‍್ಯತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments