Select Your Language

Notifications

webdunia
webdunia
webdunia
webdunia

ಕೇಳಿದ್ದು ರೂ.4700 ಕೋಟಿ, ಕೊಟ್ಟಿದ್ದು ರೂ.1782 ಕೋಟಿ

ಕೇಳಿದ್ದು ರೂ.4700 ಕೋಟಿ, ಕೊಟ್ಟಿದ್ದು ರೂ.1782 ಕೋಟಿ
Bangalore , ಶುಕ್ರವಾರ, 6 ಜನವರಿ 2017 (06:41 IST)
ಬರ ಪರಿಹಾರಕ್ಕಾಗಿ ಕೇಂದ್ರದಿಂದ ರೂ.4,700 ಕೋಟಿ ನೆರವು ನೀಡುವಂತೆ ಮನವಿ ಸಲ್ಲಿಸಿದ್ದೆವು. ಮಾರ್ಗಸೂಚಿ ಅನ್ವಯವಾಗಿಯೇ ಅಷ್ಟು ಪರಿಹಾರಕ್ಕಾಗಿ ಮನವಿ ಸಲ್ಲಿಸಲಾಗಿತ್ತು, ಆದರೆ ಕೇಂದ್ರ ಸರ್ಕಾರ ಕೇವಲ ರೂ.1,782ಕೋಟಿ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
 
ಈ ಮೊತ್ತ ತುಂಬಾ ಕಡಿಮೆಯಾಗಿದೆ ಆದ್ದರಿಂದ ಬಾಕಿ ಮೊತ್ತ ಬಿಡುಗಡೆ ಮಾಡುವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು. 
 
ನೀರು ಬಿಡಲು ಸಾಧ್ಯವಿಲ್ಲ: ತಮಿಳುನಾಡಿಗೆ 2 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಆದರೆ ಬಿಡಲು ನೀರು ಎಲ್ಲಿದೆ? ಅವರು ದಿನ ನಿತ್ಯ ವಿಚಾರಣೆ ನಡೆಸಲಿ. ಅದಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ ಬಿಡಲು ನಮ್ಮಲ್ಲಿ ನೀರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರು ಚಾಮರಾಜೇಂದ್ರ ಮೃಗಾಲಯ ಒಂದು ತಿಂಗಳು ಬಂದ್