ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾದ ಬೆನ್ನಲ್ಲೆ ಸಬ್ಸಿಡಿ ರಹಿತ ಅಡುಗೆ ಅನಿಲ ಮತ್ತು ಸೀಮೆಎಣ್ಣೆ ಬೆಲೆಯಲ್ಲಿ ಹೆಚ್ಚಳವಾಗಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನೀಡುವ ಪ್ರತಿ ಲೀಟರ ಸೀಮೆಎಣ್ಣೆ ದರದಲ್ಲಿ 3 ಪ್ರತಿಶತ ಹೆಚ್ಚಳವಾಗಿದೆ. ಇದರಿಂದ ಪ್ರತಿ ಲೀಟರ್ ಸೀಮೆಎಣ್ಣೆ ದರ 46 ರೂಪಾಯಿಗಳಿಂದ 49 ರೂಪಾಯಿಗಳಿಗೆ ಹೆಚ್ಚಳವಾಗಿದೆ ಎಂದು ತೈಲ ಸಂಸ್ಥೆಗಳು ತಿಳಿಸಿವೆ.
ಸಬ್ಸಿಡಿ ರಹಿತ ಅಡುಗೆ ಅನಿಲ ದರ 18 ಪ್ರತಿಶತ ಹೆಚ್ಚಳವಾಗಿದೆ. ಇದರಿಂದ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ದರ 509ರೂಪಾಯಿಗಳಿಂದ 527 ರೂಪಾಯಿಗಳಿಗೆ ಹೆಚ್ಚಳವಾಗಿದೆ.