Select Your Language

Notifications

webdunia
webdunia
webdunia
webdunia

ನಿಮಿಷದಲ್ಲೇ ಪ್ಯಾನ್ ಕಾರ್ಡ್ ಮಾಡಿಸಿಕೊಳ್ಳಲು ಇಲ್ಲಿದೆ ಉಪಾಯ!

ನಿಮಿಷದಲ್ಲೇ ಪ್ಯಾನ್ ಕಾರ್ಡ್ ಮಾಡಿಸಿಕೊಳ್ಳಲು ಇಲ್ಲಿದೆ ಉಪಾಯ!
ನವದೆಹಲಿ , ಸೋಮವಾರ, 2 ಜುಲೈ 2018 (09:01 IST)
ನವದೆಹಲಿ: ಪ್ಯಾನ್ ಕಾರ್ಡ್ ಕಡ್ಡಾಯವಾಗಿರುವ ಈ ಕಾಲದಲ್ಲಿ ಪ್ಯಾನ್ ಕಾರ್ಡ್ ಮಾಡಿಸಿಕೊಳ್ಳಲು ಏಜೆನ್ಸಿಗಳ ಮೂಲಕ ಕಷ್ಟಪಡುವವರಿಗೆ ಆದಾಯ ತೆರಿಗೆ ಇಲಾಖೆ ಸುಲಭ ದಾರಿ ನೀಡಿದೆ.

ಇನ್ನು ಮುಂದೆ ಪ್ಯಾನ್ ಕಾರ್ಡ್ ಮಾಡಿಸಿಕೊಳ್ಳುವುದಕ್ಕೆ ಮೊದಲಿನಷ್ಟು ಕಷ್ಟಪಡಬೇಕಿಲ್ಲ. ಉಚಿತವಾಗಿ ಕೆಲವೇ ಸೆಕೆಂಡುಗಳಲ್ಲಿ ಆನ್ ಲೈನ್ ಮೂಲಕ ಪ್ಯಾನ್ ಕಾರ್ಡ್ ಮಾಡಿಸಿಕೊಳ್ಳಬೇಕಿದೆ.

ಅದಕ್ಕೆ ಮಾಡಬೇಕಿರುವುದು ಇಷ್ಟೇ. http://www.incometaxindiaefiling.gov.in ಎಂಬ ವೆಬ್ ಸೈಟ್ ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬೇಕು. ಆಧಾರ್ ಜತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ಸಂಖ್ಯೆಗೆ ಒಟಿಪಿ ಕಳುಹಿಸಿಕೊಡಲಾಗುತ್ತದೆ.  ಇಲ್ಲಿ ಆಧಾರ್ ನಲ್ಲಿರುವಂತೆಯೇ ನಿಮ್ಮ ಹೆಸರು, ಹುಟ್ಟಿದ ದಿನಾಂಕ ಮತ್ತಿತರ ವಿವರಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಕೆಲವೇ ಕ್ಷಣಗಳಲ್ಲಿ ಇ-ಪ್ಯಾನ್ ಲಭ್ಯವಾಗುತ್ತದೆ. ಬಳಿಕ ನೀವು ನೀಡಿದ ವಿಳಾಸಕ್ಕೆ ಪ್ಯಾನ್ ಕಾರ್ಡ್ ಅಂಚೆ ಮೂಲಕ ತಲುಪುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ: ರೈತರ ಸಾಲಮನ್ನಾ ಖಚಿತ